ಮಂಗಳವಾರ, ಜನವರಿ 31, 2023
19 °C
ತಲೆ ಮರೆಸಿಕೊಂಡಿರುವ ಮುಖ್ಯ ಶಿಕ್ಷಕಿಗಾಗಿ ಪೊಲೀಸರ ಶೋಧ

6 ದಲಿತ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಮುಖ್ಯ ಶಿಕ್ಷಕಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಚೆನ್ನೈ: ಪರಿಶಿಷ್ಟ ಜಾತಿಗೆ ಸೇರಿದ ಆರು ವಿದ್ಯಾರ್ಥಿಗಳಿಂದ ಮುಖ್ಯೋಪಾಧ್ಯಾಯಿನಿಯೊಬ್ಬರು ಶೌಚಾಲಯ ಸ್ವಚ್ಛ ಮಾಡಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬರ ತಾಯಿ ನೀಡಿದ ದೂರಿನ ಅನ್ವಯ, ಆರೋಪ ಎದುರಿಸುತ್ತಿರುವ ಮುಖ್ಯ ಶಿಕ್ಷಕಿ ಗೀತಾ ರಾಣಿ ಎಂಬುವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

‘ಕೆಲ ದಿನಗಳ ಹಿಂದೆ ನನ್ನ ಮಗನಿಗೆ ಡೆಂಗ್ಯೂ ಉಂಟಾಗಿ, ಆಸ್ಪತ್ರೆಗೆ ದಾಖಲಾಗಿದ್ದ. ಹೇಗೆ ಡೆಂಗ್ಯೂ ಉಂಟಾಯಿತು ಎಂದು ಕೇಳಿದ್ದಕ್ಕೆ, ಪ‍್ರತಿದಿನ ಶೌಚಾಲಯ ಸ್ವಚ್ಛ ಮಾಡುವಾಗ ಸೊಳ್ಳೆ ಕಚ್ಚುತ್ತಿತ್ತು‘ ಎಂದು ಆತ ಹೇಳಿದ್ದಾಗಿ ಆತನ ತಾಯಿ, ದೂರದಾರೆ ಜಯಂತಿ ಹೇಳಿದ್ದಾರೆ.

‘ಕಳೆದ ವಾರ ಮಕ್ಕಳು ಕೈಯಲ್ಲಿ ಪಾತ್ರೆ ಹಾಗೂ ಕೋಲು ಹಿಡಿದುಕೊಂಡು ಶೌಚಾಲಯದಿಂದ ಹೊರ ಬರುವುದನ್ನು ಗಮನಿಸಿದ್ದರು. ಯಾಕೆ ಎಂದು ಪ್ರಶ್ನೆ ಮಾಡಿದ್ದಕ್ಕೆ, ಮುಖ್ಯ ಶಿಕ್ಷಕಿ ಶೌಚಾಲಯ ಶುಚಿಗೊಳಿಸಲು ನಿರ್ದೇಶಿಸಿದ್ದಾರೆ ಎಂದು ಉತ್ತರಿಸಿದ್ದರು. ತರಗತಿಯಲ್ಲಿ 40 ಮಕ್ಕಳಿದ್ದರೂ, ನಮ್ಮ ಮಕ್ಕಳೊಂದಿಗೆ ಅವರು ಶೌಚಾಲಯ ಸ್ವಚ್ಛಗೊಳಿಸುತ್ತಾರೆ‘ ಎಂದು ಜಯಂತಿ ಆರೋಪಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರು ಬಾಲ ನ್ಯಾಯ ಕಾಯ್ದೆ ಹಾಗೂ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದಾರೆ.

ಪ್ರಕರಣ ಬೆಳಕಿಗೆ ಬಂದ ಬಳಿಕ ಮುಖ್ಯ ಶಿಕ್ಷಕಿ ತಲೆ ಮರೆಸಿಕೊಂಡಿದ್ದು, ಅವರ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು