ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮವಸ್ತ್ರ ತೆಗೆಯಲು ವಿದ್ಯಾರ್ಥಿನಿಯರಿಗೆ ಒತ್ತಾಯ: ಶಿಕ್ಷಕಿಯರ ವಿರುದ್ಧ ಎಫ್‌ಐಆರ್

Last Updated 19 ಜುಲೈ 2022, 15:23 IST
ಅಕ್ಷರ ಗಾತ್ರ

ಹಾಪುರ, ಉತ್ತರ ಪ್ರದೇಶ: ಪರಿಶಿಷ್ಟ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಆರೋಪದ ಮೇಲೆ ಪ್ರಾಥಮಿಕ ಶಾಲೆಯೊಂದರ ಇಬ್ಬರು ಶಿಕ್ಷಕಿಯರನ್ನು ಅಮಾನತುಗೊಳಿಸಿ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಹಾಪುರ ಜಿಲ್ಲೆಯ ಉದಯಪುರ ಗ್ರಾಮದಲ್ಲಿ ಜುಲೈ 11ರಂದು ಈ ಘಟನೆ ನಡೆದಿದೆ. ಶಿಕ್ಷಕಿಯರಾದ ಸುನೀತಾ ಹಾಗೂ ವಂದನಾ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಶಾಲೆಯಲ್ಲಿ ವಿದ್ಯಾರ್ಥಿಗಳ ಫೋಟೊ ತೆಗೆಯಲಾಗುತ್ತಿತ್ತು. ಆದರೆ, ಇಬ್ಬರು ಬಾಲಕಿಯರು ಸಮವಸ್ತ್ರ ಧರಿಸಿರಲಿಲ್ಲ. ಹೀಗಾಗಿ, ಸಮವಸ್ತ್ರಗಳನ್ನು ತೆಗೆದು ಆ ಇಬ್ಬರಿಗೆ ನೀಡುವಂತೆ ಶಿಕ್ಷಕಿಯರು ಪರಿಶಿಷ್ಟ ವಿದ್ಯಾರ್ಥಿನಿಯರಿಗೆ ಸೂಚಿಸಿದ್ದರು ಎನ್ನಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿಯರ ಪಾಲಕರು ನೀಡಿರುವ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ಎಎಸ್ಪಿ ಸರ್ವೇಶ್ ಮಿಶ್ರಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT