ಸೋಮವಾರ, ಸೆಪ್ಟೆಂಬರ್ 20, 2021
30 °C

ಶಿಕ್ಷಕರ ದಿನಾಚರಣೆ: ಕೋವಿಡ್‌ ಸಮಯದಲ್ಲಿ ಶಿಕ್ಷಕರ ಪಾತ್ರ ಶ್ಲಾಘಿಸಿದ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕೋವಿಡ್‌–19 ಸಾಂಕ್ರಾಮಿಕದ ಸಮಯದಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಪಯಣಕ್ಕೆ ಯಾವುದೇ ತೊಂದರೆಯಾಗದಂತೆ ಶಿಕ್ಷಕರು ನೋಡಿಕೊಂಡಿದ್ದಾರೆ. ಅದರಲ್ಲಿ ಅವರು ಆವಿಷ್ಕಾರಗಳನ್ನು ಕೈಗೊಂಡಿರುವ ರೀತಿ ನಿಜಕ್ಕೂ ಶ್ಲಾಘನೀಯ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರ ದಿನಾಚರಣೆಯ ಅಂಗವಾಗಿ ದೇಶದ ಭೋದನಾ ಸಮೂಹಕ್ಕೆ ಶುಭಕೋರಿರುವ ಅವರು, ‘ಯುವ ಮನಸ್ಸುಗಳನ್ನು ಪೋಷಿಸುವಲ್ಲಿ ಶಿಕ್ಷಕರು ಸದಾ ಪ್ರಮುಖ ಪಾತ್ರವಹಿಸಿದ್ದಾರೆ’ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಸೆಪ್ಟೆಂಬರ್ 5ರಂದು ಮಾಜಿ ರಾಷ್ಟ್ರಪತಿ ಡಾ.ಎಸ್‌. ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.

‘ರಾಧಾಕೃಷ್ಣನ್‌ ಅವರ ಜಯಂತಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ದೇಶಕ್ಕಾಗಿ ಅವರು ನೀಡಿದ ಕೊಡುಗೆಗಳನ್ನು ನಾವು ಸದಾ ಸ್ಮರಿಸುತ್ತೇವೆ’ ಎಂದು ‍ಪ್ರಧಾನಿ ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು