ಮುಜಾಫರ್‌ನಗರ: ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಮಂಗಳವಾರ ಕೋತಿಗಳ ಗುಂಪೊಂದು ಬೆನ್ನಟ್ಟಿ ಬಂದಿದ್ದರಿಂದಾಗಿ ತಪ್ಪಿಸಿಕೊಳ್ಳಲು ಹೋಗಿ 13 ವರ್ಷದ ಬಾಲಕಿ ತನ್ನ ಮನೆಯ ಚಾವಣಿಯಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೋಪಾ ಪೊಲೀಸ್ ಠಾಣೆ ಪ್ರದೇಶದ ನಾಲಿ ಗ್ರಾಮದಲ್ಲಿ ಎಂಟನೇ ತರಗತಿ ಓದುತ್ತಿದ್ದ ಬಾಲಕಿ ಚಾವಣಿ ಮೇಲೆ ಹಾರಾಕಿದ್ದ ಬಟ್ಟೆಯನ್ನು ತರಲು ಹೋಗಿದ್ದ ವೇಳೆ ಕೋತಿಗಳ ಗುಂಪೊಂದು ಅಟ್ಟಿಸಿಕೊಂಡು ಬಂದಿವೆ. ಅವುಗಳಿಂದ ತಪ್ಪಿಸಿಕೊಳ್ಳಲೆಂದು ಓಡಿ ಚಾವಣಿ ಮೇಲಿಂದ ಬಿದ್ದಿದ್ದಾಳೆ ಎಂದು ತಿಳಿಸಿದ್ದಾರೆ.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆವೇಳೆಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಪ್ರತ್ಯೇಕ ಘಟನೆಯೊಂದರಲ್ಲಿ ಜಿಲ್ಲೆಯ ಭೋಪಾ ಪೊಲೀಸ್ ಠಾಣೆ ಪ್ರದೇಶದ ಗಂಗಾ ಕಾಲುವೆಯಲ್ಲಿಅಪರಿಚಿತ ಮಹಿಳೆಯ ಶವವನ್ನು ಪತ್ತೆಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.