ಶನಿವಾರ, ಆಗಸ್ಟ್ 20, 2022
21 °C

ಉತ್ತರಪ್ರದೇಶ: ಬಾಲಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಕ್ಷ್ಮೀಪುರ ಕಿರಿ: 14 ವರ್ಷದ ಬಾಲಕಿಯ ಮೃತದೇಹ ಮನೆಯ ಮೇಲ್ಫಾವಣಿಗೆ  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು. 

‘ಮಾಹಿತಿ ಪಡೆದ ತಕ್ಷಣವೇ ಘಟನಾ ಸ್ಥಳಕ್ಕಾಗಮಿಸಿದ ಲಕ್ಷ್ಮೀಪುರ ಕಿರಿ ಪೊಲೀಸ್‌ ಅಧಿಕಾರಿ ಸತೇಂದ್ರ ಕುಮಾರ್‌ ಸಿಂಗ್‌,  ಅರುಣ್‌ ಕುಮಾರ್ ಮತ್ತು ಮಿಥೌಲಿ ಪೊಲೀಸ್‌ ಅಧಿಕಾರಿ ಶಿಂಥಾನ್ಶು ಕುಮಾರ್ ಅವರು ತನಿಖೆಯನ್ನು ಆರಂಭಿಸಿದ್ದಾರೆ. ಈ ಸಂಬಂಧ ಬಾಲಕಿಯ ಮನೆಯವರು ಮತ್ತು ಕುಟುಂಬಸ್ಥರಲ್ಲಿ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಬಾಲಕಿಯ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇದರ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ‍ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು