ಸೋಮವಾರ, ಅಕ್ಟೋಬರ್ 26, 2020
23 °C

ಧೋನಿ ಮಗಳಿಗೆ ಅತ್ಯಾಚಾರದ ಬೆದರಿಕೆ: 16 ವರ್ಷದ ಬಾಲಕನ ಬಂಧನ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ಐದು ವರ್ಷದ ಮಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಾಚಾರದ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ ಪೊಲೀಸರು 16 ವರ್ಷದ ಬಾಲಕನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಮೂಲಕ ಧೋನಿ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ. ಈ ಸಂಬಂಧ ಧೋನಿ ಪತ್ನಿ ಸಾಕ್ಷಿ ಸಿಂಗ್‌ ರಾಂಚಿ ಪೊಲೀಸರಿಗೆ ದೂರು ನೀಡಿದ್ದರು. ಬೆದರಿಕೆ ಹಾಕಿರುವ ಬಾಲಕ 12ನೇ ತರಗತಿಯಲ್ಲಿ ಓದುತ್ತಿದ್ದು ಕಛ್‌ ಸಮೀಪದ ಮುಂದ್ರಾ ಗ್ರಾಮದ ನಿವಾಸಿ ಎಂದು ಪೊಲೀಸರು ಹೇಳಿದ್ದಾರೆ.

ರಾಂಚಿ ಪೊಲೀಸರು ಪ್ರಕರಣ ಸಂಬಂಧ ತನಿಖೆ ನಡೆಸಿ ಆರೋಪಿಯ ಬಗ್ಗೆ ಗುಜರಾತ್‌ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಛ್‌ ಪೊಲೀಸರು ಆರೋಪಿಯನ್ನು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಬಂಧಿತ ಬಾಲಕ ಬೆದರಿಕೆ ಹಾಕಿರುವ ಬಗ್ಗೆ ತಪ್ಪು ಒಪ್ಪಿಕೊಂಡಿದ್ದು ಅವನನ್ನು ರಾಂಚಿ ಪೊಲೀಸರ ವಶಕ್ಕೆ ಒಪ್ಪಿಸಲಾಗುವುದು ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಮೊದಲು ಆಟಗಾರರ ಪತ್ನಿಯರು ಅಥವಾ ಗೆಳತಿಯರಿಗೆ ಟ್ರೋಲ್‌ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗುತ್ತಿತ್ತು. ಆದರೆ, ಈಗ ಧೋನಿಯವರ ಐದು ವರ್ಷದ ಮಗಳಿಗೆ ಬೆದರಿಕೆ ಹಾಕಿದ್ದು ಮೃಗೀಯ ವರ್ತನೆಗಿಂತಲೂ ಕೀಳಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು