ಬಿಹಾರ ಚುನಾವಣೆ ಮತ ಎಣಿಕೆ: 'ತೇಜಸ್ವಿ ಭವ ಬಿಹಾರ್' ಎಂದ ತೇಜ್ ಪ್ರತಾಪ್ ಯಾದವ್

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದ್ದು, ಆರ್‌ಜೆಡಿ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ ಮುನ್ನಡೆ ಸಿಕ್ಕಿದೆ.
ಮತ ಎಣಿಕೆ ಆರಂಭವಾದ ಬಳಿಕ ತೇಜಸ್ವಿ ಯಾದವ್ ಅವರ ಸೋದರ ತೇಜ್ ಪ್ರತಾಪ್ ಯಾದವ್ ಟ್ವೀಟ್ ಮಾಡಿದ್ದು, 'ತೇಜಸ್ವಿ ಭವ ಬಿಹಾರ್' ಎಂದಿದ್ದಾರೆ.
तेजस्वी भवः बिहार!
— Tej Pratap Yadav (@TejYadav14) November 10, 2020
32 ವರ್ಷದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಸೋಮವಾರ (ನ.19) ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ತೇಜಸ್ವಿ ಅವರ ಜನ್ಮದಿನದಂದು ದೊಡ್ಡ ಉಡುಗೊರೆಯನ್ನು ನೀಡಿದ್ದೇವೆ. ಅವರು ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತುಕೊಳ್ಳಲಿದ್ದಾರೆ ಎಂದು ತೇಜ್ ಪ್ರತಾಪ್ ಯಾದವ್ ಹೇಳಿದ್ದರು.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, 'ತೇಜಸ್ವಿ ಅವರ ಜನ್ಮದಿನದಂದು ನಾವು ದೊಡ್ಡ ಉಡುಗೊರೆಯನ್ನು ನೀಡಿದ್ದೇವೆ. ಅವರು ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತುಕೊಳ್ಳಲಿದ್ದಾರೆ. ನಿತೀಶ್ ಕುಮಾರ್ ಅವರ ಭವಿಷ್ಯವನ್ನು ಜನರು ಈಗಾಗಲೇ ನಿರ್ಧರಿಸಿದ್ದಾರೆ' ಎಂದು ತಿಳಿಸಿದ್ದರು.
ಬಿಹಾರದಲ್ಲಿ ಸತತ ಮೂರು ಅವಧಿಗೆ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿದ್ದರು. ಅದರಲ್ಲಿ ಹೆಚ್ಚಿನ ಅವಧಿ ಅವರು ಎನ್‌ಡಿಎಯ ಭಾಗವಾಗಿಯೇ ಇದ್ದರು. ಈ ಬಾರಿ ಎನ್‌ಡಿಎಗೆ ಆರ್‌ಜೆಡಿ ನೇತೃತ್ವದ ಮಹಾಘಟಬಂಧನ ಭಾರಿ ಪೈಪೋಟಿ ನೀಡಿದೆ.ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಮತಗಟ್ಟೆ ಸಮೀಕ್ಷೆಗಳಲ್ಲಿ ಹೆಚ್ಚಿನವು ಅಂದಾಜಿಸಿವೆ. ಹಾಗಾಗಿ, ಈ ಫಲಿತಾಂಶ ಕುತೂಹಲ ಮೂಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.