ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಸರ್ಕಾರ ಬಂಡೆಯಂತೆ ಗಟ್ಟಿ: ತೇಜಸ್ವಿ ಯಾದವ್

Last Updated 25 ಅಕ್ಟೋಬರ್ 2022, 21:30 IST
ಅಕ್ಷರ ಗಾತ್ರ

ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದತ್ತ ಮತ್ತೆ ವಾಲಿದ್ದಾರೆ ಎಂಬ ಊಹಾಪೋಹಗಳಿಗೆ ಆರ್‌ಜೆಡಿ ನಾಯಕ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಮಂಗಳವಾರ ತೆರೆ ಎಳೆದಿದ್ದಾರೆ. ‘ಮಹಾಘಟಬಂಧನ್’ ಗಟ್ಟಿಯಾಗಿದೆ ಎಂದು ಅವರು ಹೇಳಿದ್ದಾರೆ.

ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಹಾಗೂ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ ಹಾಗೂ ಇತರ ಪಕ್ಷಗಳು ಸೇರಿ ಬಿಹಾರದ ಮೈತ್ರಿ ಸರ್ಕಾರವನ್ನು ಮುನ್ನಡೆಸುತ್ತಿವೆ. ತಮ್ಮ ಪಕ್ಷಕ್ಕೆ ಮೈತ್ರಿಕೂಟದ ಇತರ ಪಕ್ಷಗಳ ಸಂಪೂರ್ಣಬೆಂಬಲವಿದ್ದು, ಮುಂದಿನ ವಾರ ನಡೆಯಲಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲಲಿದ್ದೇವೆ ಎಂದು ತೇಜಸ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೊಕಾಮಾ ಹಾಗೂ ಗೋಪಾಲಗಂಜ್ ವಿಧಾನಸಭಾ ಕ್ಷೇತ್ರಗಳಲ್ಲಿಉಪಚುನಾವಣೆನಿಗದಿಯಾಗಿದೆ.ಎರಡೂ ಕಡೆಗಳಲ್ಲಿಸ್ಪರ್ಧೆ ಮಾಡಲುಮೈತ್ರಿಕೂಟನಿರ್ಧರಿಸಿದೆ. ಎರಡೂ ಕ್ಷೇತ್ರಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಚುನಾವಣಾ ಕಾರ್ಯತಂತ್ರ ತಜ್ಞಪ್ರಶಾಂತ್ ಕಿಶೋರ್ ಅವರು ನಿತೀಶ್ಕುರಿತು ಇತ್ತೀಚೆಗೆ ನೀಡಿದ್ದ ಹೇಳಿಕೆಯು ಬಿಹಾರದ ಮೈತ್ರಿ ಸರ್ಕಾರದ ಭವಿಷ್ಯದ ಬಗ್ಗೆ ಊಹಾಪೋಹ ಸೃಷ್ಟಿಸಿತ್ತು.‘ಎನ್‌ಡಿಎ ಜೊತೆಗಿನ ಮೈತ್ರಿ ಮುರಿದುಕೊಂಡ ಬಳಿಕ, ರಾಜ್ಯಸಭಾ ಉಪಸಭಾಪತಿಯಾಗಿರುವ ಜೆಡಿಯು ಸಂಸದ ಹರಿವಂಶ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ನಿತೀಶ್ ಸೂಚಿಸಿಲ್ಲ. ಅವರು ಬಿಜೆಪಿ ಜೊತೆಗಿನ ಮೈತ್ರಿ ಹಾದಿಯನ್ನು ಮುಕ್ತವಾಗಿ ಇಟ್ಟುಕೊಂಡಿದ್ದಾರೆ’ ಎಂದು ಆರೋಪಿಸಿದ್ದರು.

ತೇಜಸ್ವಿ ಅವರು ಸುದ್ದಿಗಾರರ ಜೊತೆ ಮಾತನಾಡುವಾಗ, ಮೈತ್ರಿಕೂಟದ ಮತ್ತೊಬ್ಬ ನಾಯಕ ಹಾಗೂ ಹಿಂದುಸ್ತಾನ್ ಅವಾಮ್ ಮೋರ್ಚಾ ಮುಖ್ಯಸ್ಥ ಜಿತನ್‌ರಾಮ್ ಮಾಂಝಿ ಅವರು ಇದ್ದರು. ನಿತೀಶ್ ಅವರು ರಾಜ್ಯದ ಹಿತಾಸಕ್ತಿಗಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಮಾಂಝಿ ಇತ್ತೀಚೆಗೆ ಹೇಳಿಕೆ ನೀಡಿದ್ದು ಇನ್ನಷ್ಟು ಅನುಮಾನಗಳಿಗೆ ಕಾರಣವಾಗಿತ್ತು.

‘ಮಾಂಝಿ ಅವರು ಹಿರಿಯರು. ಅವರು ರಕ್ಷಕರಿದ್ದಂತೆ. ನಮ್ಮ ಮೈತ್ರಿಕೂಟವು ಬಂಡೆಯಂತೆ ಗಟ್ಟಿಯಾಗಿದೆ’ ಎಂದು ತೇಜಸ್ವಿ ಹೇಳಿದ್ದಾರೆ. ಕೆಲವರು ವದಂತಿಗಳನ್ನು ಹರಡಲು ಯತ್ನಿಸುತ್ತಿದ್ದರೂ, ಅಂತಹ ಅನುಮಾನಗಳಿಗೆ ಅವಕಾಶವಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT