ಗುರುವಾರ , ಡಿಸೆಂಬರ್ 3, 2020
23 °C

ತೇಜಸ್ವಿಗೆ ಜನ್ಮದಿನದ ಉಡುಗೊರೆಯಾಗಿ ಸಿಎಂ ಕುರ್ಚಿ: ತೇಜ್ ‌ಪ್ರತಾಪ್‌ ಯಾದವ್

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ತೇಜಸ್ವಿ ಅವರ ಜನ್ಮದಿನದಂದು ದೊಡ್ಡ ಉಡುಗೊರೆಯನ್ನು ನೀಡಿದ್ದೇವೆ. ಅವರು ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತುಕೊಳ್ಳಲಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜ್‌ ಪ್ರತಾಪ್‌ ಯಾದವ್‌ ಹೇಳಿದ್ದಾರೆ.

ತಮ್ಮ ಸಹೋದರ ತೇಜಸ್ವಿ ಯಾದವ್‌ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಬಗ್ಗೆ ತೇಜ್‌ ಪ್ರತಾಪ್‌ ಯಾದವ್‌ ಭರವಸೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, 'ತೇಜಸ್ವಿ ಅವರ ಜನ್ಮದಿನದಂದು ನಾವು ದೊಡ್ಡ ಉಡುಗೊರೆಯನ್ನು ನೀಡಿದ್ದೇವೆ. ಅವರು ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತುಕೊಳ್ಳಲಿದ್ದಾರೆ. ನಿತೀಶ್‌ ಕುಮಾರ್‌ ಅವರ ಭವಿಷ್ಯವನ್ನು ಜನರು ಈಗಾಗಲೇ ನಿರ್ಧರಿಸಿದ್ದಾರೆ' ಎಂದು ತಿಳಿಸಿದ್ದಾರೆ.

ನವೆಂಬರ್‌ 10ರಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದ್ದು, ಆರ್‌ಜೆಡಿ ನೇತೃತ್ವದ ಮಹಾಘಟಬಂಧನಕ್ಕೆ ಹೆಚ್ಚು ಸ್ಥಾನಗಳು ದೊರೆಯಲಿವೆ ಎಂದು ಮತದಾನೋತ್ತರ ಸಮೀಕ್ಷೆಗಳು ಹೇಳಿವೆ.

32 ವರ್ಷದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು ಇಂದು(ಸೋಮವಾರ) ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು