ಬುಧವಾರ, ಮೇ 25, 2022
29 °C

ನಿತೀಶ್‌ ಜೀ ನನ್ನ ವಿರುದ್ಧ ಬಳಸುವ ಪದಗಳನ್ನು ಆಶೀರ್ವಾದ ಎಂದುಕೊಳ್ಳುವೆ: ತೇಜಸ್ವಿ

ಎಎನ್‌ಐ‌ Updated:

ಅಕ್ಷರ ಗಾತ್ರ : | |

ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ನನ್ನ ವಿರುದ್ಧ ಬಳಸುವ ಪದಗಳನ್ನು ಆಶೀರ್ವಾದ ಎಂದುಕೊಳ್ಳುವೆ ಎಂದು ಆರ್‌ಜೆಡಿ ನಾಯಕ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿರಿಯರಾದ ನಿತೀಶ್‌ ಕುಮಾರ್‌ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿದಿದ್ದಾರೆ. ಅವರು ನನ್ನ ವಿರುದ್ಧ ಏನೇ ಪದಗಳನ್ನು ಬಳಸಿದರೂ ಕೂಡ ನಾನು ಆಶೀರ್ವಾದದಂತೆ ಸ್ವೀಕರಿಸುತ್ತೇನೆ’ ಎಂದು ತಿಳಿಸಿದ್ದಾರೆ.

‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಉದ್ಯೋಗ ಮತ್ತು ಅಭಿವೃದ್ಧಿ ವಿಚಾರಗಳು ಪ್ರಮುಖ ಪಾತ್ರವಹಿಸಿವೆ. ಮತದಾರರು ಸೂಕ್ತವಾದದ್ದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ... ಪ್ರತಿಪಕ್ಷಗಳ ಲೇವಡಿಗೆ ಗುರಿಯಾದ ಮೋದಿ, ನಿತೀಶ್‌ ಕುಮಾರ್‌ ಪ್ರತ್ಯೇಕ ಜಾಹೀರಾತು

ಕೆಲವು ವ್ಯಕ್ತಿಗಳ ಕೇವಲ ಸ್ವಪ್ರತಿಷ್ಠೆಗಾಗಿ ರಾಜಕೀಯ ಮಾಡುತ್ತಿದ್ದಾರೆ. ಆದನ್ನು ಕೆಲಸದಲ್ಲಿ ತೋರಿಸುವುದಿಲ್ಲ ಎಂದು ಪರೋಕ್ಷವಾಗಿ ನಿತೀಶ್‌ ಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಹಾರ ವಿಧಾನಸಭೆ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಅಕ್ಟೋಬರ್‌ 28, ನವೆಂಬರ್ 3, ನವೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ನ.10ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ... ಪ್ರಜಾಮತ: ‘ಕೈ’ ದಡ ಮುಟ್ಟಲು ತೇಜಸ್ವಿ ಅನಿವಾರ್ಯ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು