ಗುರುವಾರ , ಸೆಪ್ಟೆಂಬರ್ 23, 2021
23 °C

ನರಸಿಂಹ ರಾವ್‌ಗೆ 'ಭಾರತ ರತ್ನ' ಆಗ್ರಹ: ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

 ಮಾಜಿ ಪ್ರಧಾನಿ ದಿವಂಗತ ಪಿ.ವಿ.ನರಸಿಂಹ ರಾವ್‌

ಹೈದರಾಬಾದ್: ಮಾಜಿ ಪ್ರಧಾನಿ ದಿವಂಗತ ಪಿ.ವಿ.ನರಸಿಂಹ ರಾವ್‌ ಅವರಿಗೆ ಮರಣೋತ್ತರ 'ಭಾರತ ರತ್ನ' ನೀಡಿ ಗೌರವಿಸುವಂತೆ ತೆಲಂಗಾಣ ವಿಧಾನಸಭೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಪಿ.ವಿ.ನರಸಿಂಹ ರಾವ್‌ ಅವರ ಜನ್ಮಶತಮಾನೋತ್ಸವದ ಪ್ರಯುಕ್ತ ಭಾರತ ರತ್ನ ಘೋಷಿಸುವುದು ಹಾಗೂ ಸಂಸತ್ತಿನ ಆವರಣದಲ್ಲಿ ಅವರ ಪ್ರತಿಮೆ ಸ್ಥಾಪಿಸುವಂತೆ ಆಗ್ರಹಿಸಿ ಮಂಗಳವಾರ ತೆಲಂಗಾಣ ವಿಧಾನಸಭೆ ನಿರ್ಣಯ ಅಂಗೀಕರಿಸಿದೆ.

ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮುಂದಿಟ್ಟ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

ಹೈದರಾಬಾದ್‌ನ ಸೆಂಟ್ರಲ್‌ ಯೂನಿವರ್ಸಿಟಿಗೆ ನರಸಿಂಹ ರಾವ್‌ ಅವರ ಹೆಸರಿಡುವಂತೆಯೂ ನಿರ್ಣಯದಲ್ಲಿ ಆಗ್ರಹಿಸಲಾಗಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿ ನಿರ್ಣಯವನ್ನು ಬೆಂಬಲಿಸಿದರೆ, ಅಸಾದುದ್ದೀನ್‌ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷದ ಶಾಸಕರು ವಿಧಾನಸಭೆ ಕಲಾಪಗಳಿಂದ ದೂರ ಉಳಿಯುವ ಮೂಲಕ ನಿರ್ಣಣವನ್ನು ವಿರೋಧಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು