ಗುರುವಾರ , ಡಿಸೆಂಬರ್ 3, 2020
23 °C
ಮುಂಬರುವ ಅಧಿವೇಶನದಲ್ಲಿ ನಿರ್ಣಯ ಅಂಗೀಕಾರ: ಸಿ.ಎಂ ಚಂದ್ರಶೇಖರರಾವ್‌

ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ಗೆ ಭಾರತ ರತ್ನ: ನಿರ್ಣಯ ಶೀಘ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ ಅವರಿಗೆ ಭಾರತರತ್ನ ಪ್ರದಾನ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರುವ ಸಂಬಂಧ ಮುಂದಿನ ತಿಂಗಳು ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯವನ್ನು ಅಂಗೀಕರಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್‌ ಶುಕ್ರವಾರ ಹೇಳಿದ್ದಾರೆ.

ನರಸಿಂಹರಾವ್‌ ಅವರ ಜನ್ಮಶತಮಾನೋತ್ಸವ ಆಚರಣೆ ಕುರಿತು ಸಂಪುಟ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಈ ವಿಷಯ ತಿಳಿಸಿದರು.

‘ಸಂಸತ್‌ ಭವನದಲ್ಲಿ ರಾವ್‌ ಅವರ ಭಾವಚಿತ್ರವನ್ನು ಅಳವಡಿಸಬೇಕು. ಹೈದರಾಬಾದ್‌ನಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಅವರ ಹೆಸರಿಡುವಂತೆಯೂ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು