ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ತೆಲಂಗಾಣ | ಪಾದಯಾತ್ರೆಗೆ ತಡೆ; ಗೃಹ ಬಂಧನದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

Last Updated 28 ನವೆಂಬರ್ 2022, 5:06 IST
ಅಕ್ಷರ ಗಾತ್ರ

ಹೈದರಾಬಾದ್: ಇಂದಿನಿಂದ ಐದನೇ ಹಂತದ ಪ್ರಜಾ ಸಂಗ್ರಾಮ ಯಾತ್ರೆ ಕೈಗೊಳ್ಳಲು ಮುಂದಾಗಿದ್ದ ತೆಲಂಗಾಣ ಬಿಜೆಪಿ ಘಟಕದ ಅಧ್ಯಕ್ಷ ಬಂದಿ ಸಂಜಯ್‌ ಕುಮಾರ್‌ ಅವರನ್ನು ಪೊಲೀಸರು ಗೃಹ ಬಂಧನದಲ್ಲಿ ಇರಿಸಿದ್ದಾರೆ.

ಪಾದಯಾತ್ರೆಯ 5ನೇ ಹಂತವು ಭೈನ್ಸಾದಿಂದ ಇಂದಿನಿಂದ ಆರಂಭವಾಗಬೇಕಿತ್ತು. ಹೀಗಾಗಿಸಂಜಯ್‌ ಅವರುಭಾನುವಾರ ರಾತ್ರಿ ಕರೀಂನಗರದಿಂದ ಭೈನ್ಸಾಗೆ ತೆರಳುತ್ತಿದ್ದರು.

'ಕೋಮು ಸೂಕ್ಷ್ಮ ಪ್ರದೇಶವಾಗಿರುವ ಭೈನ್ಸಾ ಈ ಹಿಂದೆ ಕೆಲವು ಸಂದರ್ಭಗಳಲ್ಲಿ ಕೋಮುಗಲಭೆಗಳಿಗೆ ಸಾಕ್ಷಿಯಾಗಿದೆ. ಪ್ರಜಾ ಸಂಗ್ರಾಮ ಪಾದಯಾತ್ರೆಯಿಂದ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗಬಹುದು' ಎಂದು ಆತಂಕ ವ್ಯಕ್ತಪಡಿಸಿರುವ ಪೊಲೀಸರು,ಯಾತ್ರೆಗೆ ಅನುಮತಿ ನಿರಾಕರಿಸಿ ಸಂಜಯ್‌ ಅವರನ್ನು ಮಾರ್ಗ ಮಧ್ಯೆಯೇ ತಡೆದು ಕರೀಂನಗರಕ್ಕೆ ವಾಪಸ್ ಕರೆತಂದಿದ್ದಾರೆ.

ಸಂಜಯ್‌ ಅವರ ಮನೆಯ ಸುತ್ತಲೂ ಭಾರಿ ಸಂಖ್ಯೆಯಲ್ಲಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಂಜಯ್‌ ಅವರನ್ನು ಭೇಟಿಯಾಗಲು ಬರುವವರಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಕರೀಂನಗರ ಸಂಸದರೂ ಆಗಿರುವ ಸಂಜಯ್‌, 'ಪೊಲೀಸರು ಆರಂಭದಲ್ಲಿ ಪಾದಯಾತ್ರೆಗೆಅನುಮತಿ ನೀಡಿದ್ದರು.ಆದರೆ, ಎಲ್ಲ ಸಿದ್ಧತೆಗಳನ್ನೂ ಮಾಡಿಕೊಂಡ ನಂತರ ಅನುಮತಿ ಹಿಂಪಡೆದಿದ್ದರು.ಭೈನ್ಸಾ ಸೂಕ್ಷ್ಮ ಪ್ರದೇಶ. ನಿಷೇಧಿತ ವಲಯ ಎಂದು ಹೇಳುತ್ತಿದ್ದಾರೆ.ಪೊಲೀಸರ ಕ್ರಮವನ್ನು ಪ್ರಶ್ನಿಸಿ ತಮ್ಮ ಪಕ್ಷವು ಹೈಕೋರ್ಟ್‌ ಮೆಟ್ಟಿಲೇರಲಿದೆ' ಎಂದು ಪ್ರತಿಕ್ರಿಯಿಸಿದ್ದಾರೆ.

ಭೈನ್ಸಾದತ್ತ ತೆರಳಿದ್ದಸಂಜಯ್‌ಅವರನ್ನು ಜಗ್ತಿಯಾಲ್‌ ಬಳಿ ತಡೆದಾಗ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.ತಮ್ಮ ವಾಹನದಿಂದ ಕೆಳಗಿಳಿಯಲು ನಿರಾಕರಿಸಿದ ಸಂಜಯ್‌ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಬಳಿಕ ಅವರನ್ನು ವಶಕ್ಕೆ ಪಡೆಯಲಾಯಿತು.

ಪೊಲೀಸರ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಜಗ್ತಿಯಾಲ್‌, ಕೊರುತ್ಲಾ, ನಿರ್ಮಲ್‌ ಹಾಗೂಕರಿಂನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಯಾತ್ರೆ ಆರಂಭಕ್ಕೂ ಮುನ್ನ ನಡೆಯುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಂತೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್‌ ಅವರಿಗೂ ಆಹ್ವಾನ ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT