ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಆ.7ರಂದು ನಡೆಯಲಿರುವ ನೀತಿ ಆಯೋಗದ ಸಭೆಗೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಗೈರಾಗಲಿದ್ದಾರೆ.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಅವರು, 'ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಿಲ್ಲ. ಇದು ಕೇಂದ್ರದ ವಿರುದ್ಧದ ಪ್ರತಿಭಟನೆಯ ಸಂಕೇತವಾಗಿದೆ’ ಎಂದು ತಿಳಿಸಿದ್ದಾರೆ.

‘ಜನರ ಅಗತ್ಯಗಳನ್ನು ಪೂರೈಸಲು ರಾಜ್ಯ ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕಿದೆ. ಆದರೆ, ಈ ಯೋಜನೆಗಳಿಗೆ ಕೇಂದ್ರವು ಸಹಕರಿಸುತ್ತಿಲ್ಲ’ ಎಂದು ರಾವ್ ಹರಿಹಾಯ್ದಿದ್ದಾರೆ.

ನೀತಿ ಆಯೋಗದ ಏಳನೇ ಆಡಳಿತ ಮಂಡಳಿ ಸಭೆ ಆ.7ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಇದು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಯೋಗದ ಹೊಸ ಯುಗಕ್ಕೆ ನಾಂದಿ ಹಾಡಲಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಆಯೋಗದ ಸದಸ್ಯರು ಹಾಗೂ ಮುಖ್ಯಮಂತ್ರಿಗಳಿಗೆ 2019ರ ಜುಲೈ ನಂತರ ಇದು ಮೊದಲ ಭೌತಿಕ ಸಭೆಯಾಗಿದೆ.

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯಲಿರುವ ಸಭೆಯ ಕಾರ್ಯಸೂಚಿಯಲ್ಲಿ ಬೆಳೆ ವೈವಿಧ್ಯೀಕರಣ ಮತ್ತು ಎಣ್ಣೆಕಾಳು, ಬೇಳೆ ಕಾಳು, ಕೃಷಿ ಸಮುದಾಯದಲ್ಲಿ ಸ್ವಾವಲಂಬನೆ ಸಾಧಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.