ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಶಿಲೀಂಧ್ರ ‘ಸಾಂಕ್ರಾಮಿಕ ರೋಗ’: ತೆಲಂಗಾಣ ಘೋಷಣೆ

Last Updated 20 ಮೇ 2021, 7:20 IST
ಅಕ್ಷರ ಗಾತ್ರ

ಹೈದರಾಬಾದ್‌: ಕಪ್ಪು ಶಿಲೀಂಧ್ರ ರೋಗವನ್ನು (ಬ್ಲ್ಯಾಕ್‌ ಫಂಗಸ್‌) ‘ಸಾಂಕ್ರಾಮಿಕ ರೋಗ’ ಎಂದು ತೆಲಂಗಾಣ ಸರ್ಕಾರ ಗುರುವಾರ ಘೋಷಿಸಿದೆ.

ಈ ಸಂಬಂಧ ಸಾಂಕ್ರಾಮಿಕ ರೋಗಗಳ ಕಾಯ್ದೆ– 1897ರಡಿ ಅಧಿಸೂಚನೆ ಹೊರಡಿಸಲಾಗಿದೆ.

ಈ ರೋಗದ ಪತ್ತೆ ಹಾಗೂ ಚಿಕಿತ್ಸೆಗೆ ಸಂಬಂಧಪಟ್ಟಂತೆ ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್‌) ನೀಡಿರುವ ಮಾರ್ಗಸೂಚಿಗಳನ್ನು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಪಾಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶಂಕಿತ ಹಾಗೂ ದೃಢಪಟ್ಟ ಕಪ್ಪು ಶಿಲೀಂಧ್ರ ಪ್ರಕರಣಗಳ ಬಗ್ಗೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸುವುದು ಕಡ್ಡಾಯ ಎಂದೂ ಸೂಚಿಸಲಾಗಿದೆ.

ಗಾಂಧಿ ಜನರಲ್‌ ಆಸ್ಪತ್ರೆ ಹಾಗೂ ರಾಜ್ಯ ಸರ್ಕಾರದ ಇಎನ್‌ಟಿ ಆಸ್ಪತ್ರೆಗಳನ್ನು ಈ ರೋಗದ ಚಿಕಿತ್ಸೆಗಾಗಿ ನೋಡಲ್‌ ಕೇಂದ್ರಗಳನ್ನಾಗಿ ನಿಯೋಜಿಸಲಾಗಿದೆ.

ಕೋವಿಡ್‌–19ನಿಂದ ಗುಣಮುಖರಾದವರಲ್ಲಿ ಈ ರೋಗವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT