ಶುಕ್ರವಾರ, ಅಕ್ಟೋಬರ್ 23, 2020
21 °C

ಕೆಸಿಆರ್‌ ಪುತ್ರಿ ಕವಿತಾ ಈಗ ಎಂಎಲ್‌ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೆಲಂಗಾಣ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರ ಪುತ್ರಿ ಕವಿತಾ ಎಂಎಲ್‌ಸಿಯಾಗಿ ಆಯ್ಕೆಯಾಗಿದ್ದಾರೆ. 

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ನಿಜಾಮಬಾದ್‌ದಿಂದ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಕಲ್ವಕುಂಟ್ಲ ಕವಿತಾ ಜಯ ಸಾಧಿಸಿದ್ದಾರೆ. ಎಂಎಲ್‌ಸಿ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದಿತ್ತು. ಸೋಮವಾರ ಫಲಿತಾಂಶ ಪ್ರಕಟಿಸಲಾಗಿದೆ. 

ಒಟ್ಟು 823 ಮತಗಳಲ್ಲಿ, ಕವಿತಾ 728 ಮತ ಗಳಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳು ಕ್ರಮವಾಗಿ 56 ಮತ್ತು 29 ಮತ ಗಳಿಸಿದ್ದಾರೆ. 10 ಮತಗಳು ತಿರಸ್ಕೃತಗೊಂಡವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು