ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ, ತೆಲಂಗಾಣ ಸೇರಿ ಐದು ರಾಜ್ಯಗಳಲ್ಲಿ ಕೋವಿಡ್–19 ಲಾಕ್‌ಡೌನ್ ವಿಸ್ತರಣೆ

Last Updated 31 ಮೇ 2021, 2:19 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಐದು ರಾಜ್ಯಗಳಲ್ಲಿ ಕೋವಿಡ್–19 ಹರಡುವಿಕೆ ತಡೆಗೆ ವಿಧಿಸಲಾಗಿರುವ ಲಾಕ್‌ಡೌನ್‌ ಅನ್ನು ವಿಸ್ತರಿಸಲಾಗಿದೆ.

ತೆಲಂಗಾಣದಲ್ಲಿ 10 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದ್ದು, ಜೂನ್ 9ರ ವರೆಗೆ ಮುಂದುವರಿಯಲಿದೆ. ಆದರೆ, ಲಾಕ್‌ಡೌನ್‌ ಮುಂದುವರಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಜೂನ್ 15ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಕೋವಿಡ್‌ ಪಾಸಿಟಿವಿಟಿ ದರ, ಆಮ್ಲಜಕ ಹಾಸಿಗೆಗಳ ಲಭ್ಯತೆ ನೋಡಿಕೊಂಡು ಆಯಾ ಪ್ರದೇಶಗಳಿಗೆ ಅನುಗುಣವಾಗಿ ಹೆಚ್ಚಿನ ವಿನಾಯಿತಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಹರಿಯಾಣ, ಒಡಿಶಾ ಮತ್ತು ಸಿಕ್ಕಿಂಗಳಲ್ಲೂ ಲಾಕ್‌ಡೌನ್ ಅವಧಿ ವಿಸ್ತರಿಸಲಾಗಿದೆ.

ಕೇರಳ, ದೆಹಲಿ, ಪುದುಚೇರಿ, ಮೇಘಾಲಯ, ಗೋವಾ ಮತ್ತು ಮಿಜೋರಾಂಗಳಲ್ಲಿ ಶನಿವಾರವೇ ಲಾಕ್‌ಡೌನ್ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT