ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಆರ್‌ಎಸ್ ದುರಾಡಳಿತದಿಂದ ತೆಲಂಗಾಣ ಸಂಕಷ್ಟ ಎದುರಿಸುತ್ತಿದೆ: ರಾಹುಲ್

Last Updated 2 ಜೂನ್ 2022, 9:40 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ಎಂಟು ವರ್ಷಗಳಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ದುರಾಡಳಿತದಿಂದ ರಾಜ್ಯವು ತೀವ್ರ ಸಂಕಷ್ಟ ಎದುರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

ತೆಲಂಗಾಣ ರಾಜ್ಯ ರಚನೆಗಾಗಿ ಕಾಂಗ್ರೆಸ್ ಪಕ್ಷದ ಬದ್ಧತೆಯನ್ನು ರಾಹುಲ್ ಪ್ರತಿಪಾದಿಸಿದರು. ತೆಲಂಗಾಣವನ್ನು ಮಾದರಿ ರಾಜ್ಯವನ್ನಾಗಿ ನಿರ್ಮಿಸಲು ಹಾಗೂ ರೈತರು, ಕಾರ್ಮಿಕರು ಮತ್ತು ಬಡವರು ಸೇರಿದಂತೆ ಎಲ್ಲ ವರ್ಗದ ಜನರ ಏಳಿಗೆಯನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ಬದ್ಧವಾಗಿರುವುದಾಗಿ ತಿಳಿಸಿದರು.

'ತೆಲಂಗಾಣವು ರಾಜ್ಯದ ಜನರ ಉತ್ತಮ ಭವಿಷ್ಯದ ಆಕಾಂಕ್ಷೆಯಿಂದ ಹುಟ್ಟಿದೆ. ಕಾಂಗ್ರೆಸ್ ಪಕ್ಷ ಹಾಗೂ ಸೋನಿಯಾ ಗಾಂಧಿ ಜನರ ಧ್ವನಿಯನ್ನು ಆಲಿಸಿ ತೆಲಂಗಾಣದ ಕನಸನ್ನು ನನಸಾಗಿಸಲು ನಿಸ್ವಾರ್ಥವಾಗಿ ಕೆಲಸ ಮಾಡಿದ್ದಾರೆ ಎಂಬುದರ ಬಗ್ಗೆ ನನಗೆ ಹೆಮ್ಮೆಯಿದೆ' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

'ಕಳೆದ ಎಂಟು ವರ್ಷಗಳಲ್ಲಿ ತೆಲಂಗಾಣವು ಟಿಆರ್‌ಎಸ್‌ನ ದುರಾಡಳಿತದಿಂದ ತೀವ್ರ ಸಂಕಷ್ಟವನ್ನು ಅನುಭವಿಸಿದೆ. ತೆಲಂಗಾಣ ರಾಜ್ಯ ರಚನೆಯ ದಿನದಂದು ಭವ್ಯ ರಾಜ್ಯ ನಿರ್ಮಾಣದ ಕುರಿತು ಕಾಂಗ್ರೆಸ್ ಬದ್ಧತೆಯನ್ನು ಪುನರುಚ್ಚರಿಸಲು ಬಯಸುತ್ತೇನೆ' ಎಂದು ಹೇಳಿದ್ದಾರೆ.

2014ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದಲ್ಲಿ ತೆಲಂಗಾಣ ರಾಜ್ಯದ ರಚನೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT