ಬುಧವಾರ, ಸೆಪ್ಟೆಂಬರ್ 22, 2021
23 °C

ತೆಲಂಗಾಣ: ಯುನೆಸ್ಕೊ ವಿಶ್ವ ಪಾರಂಪರಿಕತಾಣ ಪಟ್ಟಿಗೆ ಪಾಲಂಪೇಟ್‌ನ ರಾಮಪ್ಪ ದೇವಸ್ಥಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ತೆಲಂಗಾಣದ ವಾರಂಗಲ್‌ ಜಿಲ್ಲೆಯ ಪಾಲಂಪೇಟ್ ಗ್ರಾಮದಲ್ಲಿರುವ ರಾಮಪ್ಪ ದೇವಸ್ಥಾನಕ್ಕೆ ‘ಯುನೆಸ್ಕೊ ವಿಶ್ವ ಪಾರಂಪರಿಕ ತಾಣ’ ಗೌರವ ನೀಡಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್‌ ರೆಡ್ಡಿ ಭಾನುವಾರ ತಿಳಿಸಿದ್ದಾರೆ.

ಈ ಕುರಿತು ಅವರು, ‘ಈ ವಿಷಯ ಹಂಚಿಕೊಳ್ಳಲು ಸಂತಸ ಎನಿಸುತ್ತದೆ. ಈ ನಿಟ್ಟಿನಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಪರವಾಗಿ, ಅದರಲ್ಲೂ ತೆಲಂಗಾಣ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

13ನೇ ಶತಮಾನದ ಈ ದೇವಸ್ಥಾನ ತನ್ನ ವಾಸ್ತುಶಿಲ್ಪದಿಂದಾಗಿ ಗಮನ ಸೆಳೆಯುತ್ತದೆ. ಈ ದೇವಸ್ಥಾನವನ್ನು ನಿರ್ಮಿಸಿರುವ ಶಿಲ್ಪಿ ರಾಮಪ್ಪ ಅವರ ಹೆಸರನ್ನೇ ದೇಗುಲಕ್ಕೆ ಇಡಲಾಗಿದೆ.

‘ಕಾಕತೀಯ ರಾಜವಂಶದ ಕಲಾ ಶ್ರೀಮಂತಿಕೆಯನ್ನು ರಾಮಪ್ಪ ದೇವಸ್ಥಾನ ಬಿಂಬಿಸುತ್ತದೆ. ಈ ದೇವಸ್ಥಾನಕ್ಕೆ ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಗೌರವ ಲಭಿಸಿದ್ದಕ್ಕಾಗಿ ತೆಲಂಗಾಣ ರಾಜ್ಯದ ಜನರನ್ನು ಅಭಿನಂದಿಸುವೆ. ಪ್ರತಿಯೊಬ್ಬರೂ ಈ ದೇವಸ್ಥಾನಕ್ಕೆ ಭೇಟಿ ನೀಡಿ, ಅದರ ವೈಭವವನ್ನು ಕಣ್ತುಂಬಿಕೊಳ್ಳಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಈ ಬಾರಿ ಕೇಂದ್ರ ಸರ್ಕಾರ ಈ ದೇವಸ್ಥಾನದ ಹೆಸರಿರುವ ಪ್ರಸ್ತಾವನೆಯನ್ನು ಮಾತ್ರ ವಿಶ್ವ ಪಾರಂಪರಿಕ ತಾಣ ಗೌರವಕ್ಕಾಗಿ ಸಲ್ಲಿಸಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು