ಶನಿವಾರ, ಮೇ 21, 2022
23 °C

ಗಡ್‌ಚಿರೋಲಿ ಎನ್‌ಕೌಂಟರ್‌: ಮಿಲಿಂದ್ ತೇಲ್ತುಂಬ್ಡೆ ಸಹಿತ 26 ನಕ್ಸಲರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ 26 ಮಂದಿ ನಕ್ಸಲರಲ್ಲಿ ಹಿರಿಯ ಮಾವೋವಾದಿ ನಾಯಕ ಮಿಲಿಂದ್‌ ತೇಲ್ತುಂಬ್ಡೆ ಸಹ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಇಲ್ಲಿಂದ 900 ಕಿ.ಮೀ.ದೂರದ ಮರ್ದಿಂತೋಲಾ ಅರಣ್ಯ ವ್ಯಾಪ್ತಿಯ ಕೊರ್ಚಿ ಎಂಬಲ್ಲಿ ಈ ಎನ್‌ಕೌಂಟರ್‌ ನಡೆದಿತ್ತು. ಮೃತ ನಕ್ಸಲರ ಗುರುತು ಪತ್ತೆ ಹಚ್ಚುವ ವೇಳೆ ಕೋರೆಗಾಂವ್‌ ಭೀಮಾ ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಆರೋಪಿಯಾಗಿರುವ ತೇಲ್ತುಂಬ್ಡೆ ಅವರ ಮೃತದೇಹ ಗುರುತಿಸಲಾಯಿತು ಎಂದು ಅಧಿಕಾರಿ ಹೇಳಿದ್ದಾರೆ.

ಎನ್‌ಕೌಂಟರ್‌ ವೇಳೆ ನಾಲ್ವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರು ಇದೀಗ ನಾಗಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು