ಮಂಗಳವಾರ, ಆಗಸ್ಟ್ 16, 2022
29 °C

ಕಾಶ್ಮೀರದಲ್ಲಿ ಲಘು ಹಿಮ: ಬಹುತೇಕ ಪ್ರದೇಶಗಳಲ್ಲಿ ಕೆಲ ಹೊತ್ತು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಕಾಶ್ಮೀರ ಕಣಿವೆಯ ಕೆಲ ಭಾಗಗಳಲ್ಲಿ ಸೋಮವಾರ ಲಘು ಪ್ರಮಾಣದ ಹಿಮ ಸುರಿದಿದ್ದು, ಬಹುತೇಕ ಪ್ರದೇಶಗಳಲ್ಲಿ ಕೆಲ ಹೊತ್ತು ಮಳೆಯಾಗಿದೆ. ಇದರ ಪರಿಣಾಮ ಶೀತ ಗಾಳಿಯ ತೀವ್ರತೆ ಕಡಿಮೆಯಾಗಿದೆ.

ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಭಾನುವಾರ ರಾತ್ರಿ –2.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಕಣಿವೆಯ ಹೆಬ್ಬಾಗಿಲು ಕ್ವಾಜಿಗುಂಡದಲ್ಲಿ –1.2, ಕೊಕರ್‌ನಾಗ್‌ನಲ್ಲಿ –2.3, ಕುಪ್ವಾರ –1.5, ಪಹಲ್ಗಾಮ್‌ನಲ್ಲಿ –4.1, ಗುಲ್‌ಮಾರ್ಗ್‌ನಲ್ಲಿ –6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

‘ಗುಲ್‌ಮಾರ್ಗ್‌, ಸೋನಾಮಾರ್ಗ್‌ ಹಾಗೂ ಪಹಲ್ಗಾಮ್‌ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಲಘು ಪ್ರಮಾಣದ ಹಿಮ ಸುರಿದಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು