ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ರಾಜ್ಯಗಳಲ್ಲಿ ಶೇ 73.05 ರಷ್ಟು ಹೊಸ ಕೋವಿಡ್‌-19 ಪ್ರಕರಣ

Last Updated 30 ಏಪ್ರಿಲ್ 2021, 7:53 IST
ಅಕ್ಷರ ಗಾತ್ರ

ನವದೆಹಲಿ: ‘ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ ಸೇರಿದಂತೆ ದೇಶದ ಹತ್ತು ರಾಜ್ಯಗಳಲ್ಲಿ ದೈನಂದಿನ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗಿದೆ. ಈ ರಾಜ್ಯಗಳು ದೇಶದಲ್ಲಿ ವರದಿಯಾದ ಹೊಸ ಪ್ರಕರಣಗಳಲ್ಲಿ ಶೇಕಡ 73.05ರಷ್ಟು ಪಾಲನ್ನು ಹೊಂದಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶುಕ್ರವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 3,86,452 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇದು ಈವರೆಗಿನ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ.

ಅತಿ ಹೆಚ್ಚು ದೈನಂದಿನ ಕೋವಿಡ್‌ ಪ್ರಕರಣಗಳು ವರದಿಯಾದ 10 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ, ಕೇರಳ, ಛತ್ತೀಸಗಡ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರ‍ಪದೇಶ ಮತ್ತು ರಾಜಸ್ತಾನವೂ ಸೇರಿದೆ.

ಹೊಸ ಪ್ರಕರಣಗಳ ಪೈಕಿ 66,159 ಪ್ರಕರಣಗಳು ಮಹಾರಾಷ್ಟ್ರದಲ್ಲಿ ದೃಢಪಟ್ಟಿದ್ದು, ಅದು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕೇರಳ 38,607 ಮತ್ತು ಉತ್ತರ ಪ್ರದೇಶ 35,104 ಪ್ರಕರಣಗಳೊಂದಿಗೆ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.

‘ಕಳೆದ 24 ಗಂಟೆಗಳಲ್ಲಿ 19 ಲಕ್ಷ(19,20,107) ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದು ಒಂದು ದಿನದಲ್ಲಿ ನಡೆಸಲಾದ ಅತಿ ಹೆಚ್ಚಿನ ಪರೀಕ್ಷೆಗಳಾಗಿವೆ. ಭಾರತದಲ್ಲಿ 31,70,228 ಸಕ್ರಿಯ ಪ್ರಕರಣಗಳಿದ್ದು, ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 16.90ರಷ್ಟು ಭಾಗವನ್ನು ಹೊಂದಿದೆ. ರಾಷ್ಟ್ರೀಯ ಮರಣ ಪ್ರಮಾಣವು 1.11 ರಷ್ಟಿದೆ’ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 3,498 ಮಂದಿ ಸಾವಿಗೀಡಾಗಿದ್ದು, ಮಹಾರಾಷ್ಟ್ರದಲ್ಲಿ 771 ಮತ್ತು ದೆಹಲಿಯಲ್ಲಿ 395 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 1,53,84,418 ರೋಗಿಗಳು ಸೋಂಕಿನಿಂದ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT