ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಶೇ.82.04ರಷ್ಟು ಹೊಸ ಪ್ರಕರಣ

Last Updated 14 ಏಪ್ರಿಲ್ 2021, 10:24 IST
ಅಕ್ಷರ ಗಾತ್ರ

ನವದೆಹಲಿ: ‘ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸಗಡ, ಕರ್ನಾಟಕ, ಕೇರಳ ಸೇರಿದಂತೆ ದೇಶದ ಹತ್ತು ರಾಜ್ಯಗಳಲ್ಲಿ ದೈನಂದಿನ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗಿದೆ. ಈ ರಾಜ್ಯಗಳು ದೇಶದಲ್ಲಿ ವರದಿಯಾದ ಹೊಸ ಪ್ರಕರಣಗಳಲ್ಲಿ ಶೇಕಡ 82.04ರಷ್ಟು ಪಾಲನ್ನು ಹೊಂದಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ತಿಳಿಸಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,84,372 ಹೊಸ ಪ್ರಕರಣಗಳು ವರದಿಯಾಗಿವೆ.60,212 ಹೊಸ ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಉತ್ತರ ಪ್ರದೇಶ 17,963 ಮತ್ತು ಛತ್ತೀಸಗಡ 15,121 ಪ್ರಕರಣಗಳೊಂದಿಗೆ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

‘ದೇಶದಲ್ಲಿ ಈವರೆಗೆ 26 ಕೋಟಿ ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದೊಂದು ಹೊಸ ಮೈಲಿಗಲ್ಲು. ಒಂದೇ ದಿನದಲ್ಲಿ 14,11,758 ಪರೀಕ್ಷೆಗಳನ್ನು ನಡೆಸಲಾಗಿದೆ. ಪ್ರತಿನಿತ್ಯ ಸರಾಸರಿ 15 ಲಕ್ಷ ಪರೀಕ್ಷೆಗಳನ್ನು ಮಾಡಲಾಗುತ್ತಿದೆ’ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 82,339 ಮಂದಿ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಗುಣಮುಖರಾದವರ ಒಟ್ಟು ಸಂಖ್ಯೆ 1,23,36,036ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ಕಳೆದ 24 ಗಂಟೆಗಳಲ್ಲಿ 1,027 ಮಂದಿ ಮೃತಪಟ್ಟಿದ್ದಾರೆ.

ಈವರೆಗೆ 11,11,79,578 ಡೋಸ್ ಲಸಿಕೆ‌ಗಳನ್ನು ನೀಡಲಾಗಿದೆ. ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್‌, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ಮಧ್ಯಪ್ರದೇಶ, ಕರ್ನಾಟಕ ಮತ್ತು ಕೇರಳದ ಪಾಲು ಶೇಕಡ 60.16ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT