ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಹತ್ತು ರಾಜ್ಯಗಳಲ್ಲಿ ಶೇ 71ರಷ್ಟು ಕೋವಿಡ್ ಪ್ರಕರಣಗಳು

Last Updated 9 ಮೇ 2021, 11:07 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದಲ್ಲಿ ಒಂದೇ ದಿನ 4,03,738 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳಲ್ಲಿ ಶೇ 71ರಷ್ಟು ಪ್ರಕರಣಗಳು ಮಹಾರಾಷ್ಟ್ರ, ಕರ್ನಾಟಕ ಮತ್ತು ದೆಹಲಿ ಸೇರಿದಂತೆ 10 ರಾಜ್ಯಗಳಿಂದ ವರದಿಯಾಗಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಭಾನುವಾರ ತಿಳಿಸಿದೆ.

ಕೇರಳ, ತಮಿಳುನಾಡು, ಉತ್ತರ ಪ್ರದೇಶ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಹರಿಯಾಣ– ಒಂದೇ ದಿನದಲ್ಲಿ ಅತಿಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾದ ಹತ್ತು ರಾಜ್ಯಗಳ ಪಟ್ಟಿಯಲ್ಲಿವೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ ಅತಿ ಹೆಚ್ಚು ಅಂದರೆ 56,578 ಹೊಸ ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲಿ 47,563 ಹಾಗೂ ಕೇರಳದಲ್ಲಿ 41,971 ಹೊಸ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಇದುವರೆಗೆ 30.22 ಕೋಟಿ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದ್ದು, ಕೋವಿಡ್ ಪ್ರಕರಣಗಳಲ್ಲಿ ಸಂಖ್ಯೆಯ ಪ್ರಮಾಣ ಶೇ 21.64ಕ್ಕೆ ಏರಿದೆ ಎಂದು ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 37,36,648ಕ್ಕೆ ತಲುಪಿದೆ. ಒಟ್ಟಾರೆ ಸೋಂಕಿನ ಪ್ರಮಾಣವು ಶೇ 16.76ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯು 24 ಗಂಟೆಗಳ ಅವಧಿಯಲ್ಲಿ 13,202ರಷ್ಟು ಹೆಚ್ಚಾಗಿದೆ.

ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ರಾಜಸ್ಥಾನ, ಆಂಧ್ರಪ್ರದೇಶ, ಗುಜರಾತ್, ಛತ್ತೀಸ್‌ಘಡ, ಪಶ್ಚಿಮ ಬಂಗಾಳ, ಹರಿಯಾಣ, ಬಿಹಾರ ಮತ್ತು ಮಧ್ಯಪ್ರದೇಶಗಳಲ್ಲಿ ಸೋಂಕಿನ ಪ್ರಮಾಣವು ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಶೇ 82.94ರಷ್ಟಿದೆ ಎಂದೂ ಆರೋಗ್ಯ ಸಚಿವಾಲಯವು ತಿಳಿಸಿದೆ.

‘ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 4,092 ಸಾವಿನ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ಮರಣದ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಪ್ರಸ್ತುತ ಮರಣದ ಪ್ರಮಾಣವು ಶೇ 1.09ರಷ್ಟಿದೆ’ ಎಂದೂ ಹೇಳಿದೆ.

ಹತ್ತು ರಾಜ್ಯಗಳಲ್ಲಿ ಹೊಸದಾಗಿ ಸಾವಿಗೀಡಾದವರ ಪ್ರಮಾಣವು ಶೇ 74.93ರಷ್ಟಿದೆ. ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಅಂದರೆ 864 ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 482 ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ 16.94 ಕೋಟಿ ಜನರಿಗೆ ಕೋವಿಡ್‌–19 ನಿರೋಧಕ ಲಸಿಕೆ ನೀಡಲಾಗಿದೆ. ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಆಂಧ್ರಪ್ರದೇಶಗಳಲ್ಲಿ ಈವರೆಗೆ ನೀಡಲಾದ ಒಟ್ಟು ಪ್ರಮಾಣದಲ್ಲಿ ಶೇ 66.78ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

18-44 ವರ್ಷದೊಳಗಿನ ಒಟ್ಟು 17,84,869 ಫಲಾನುಭವಿಗಳು ತಮ್ಮ ಮೊದಲ ಡೋಸ್ ಕೋವಿಡ್‌–19 ಲಸಿಕೆಯನ್ನು ಪಡೆದಿದ್ದಾರೆ. 24 ಗಂಟೆಗಳ ಅವಧಿಯಲ್ಲಿ 20ಲಕ್ಷಕ್ಕೂ ಹೆಚ್ಚಿನ ಡೋಸ್‌ನ ಲಸಿಕೆಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT