ಗುರುವಾರ , ಸೆಪ್ಟೆಂಬರ್ 24, 2020
24 °C

ಪುಲ್ವಾಮದಲ್ಲಿ ಎನ್‌ಕೌಂಟರ್‌: ಒಬ್ಬ ಉಗ್ರ, ಯೋಧ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ‍ಪುಲ್ವಾಮ ಜಿಲ್ಲೆಯಲ್ಲಿ ಬುಧವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ಉಗ್ರನೊಬ್ಬ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದರು.

‘ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಯ ಸಿಬ್ಬಂದಿ ಪುಲ್ವಾಮ ಜಿಲ್ಲೆಯ ಕಮ್ರಾಜಿಪೊರಾದಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಉಗ್ರರು ದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳ ಯೋಧರು ಪ್ರತಿ ದಾಳಿ ನಡೆಸಿದರು. ಈ ಗುಂಡಿನ ಚಕಮಕಿಯಲ್ಲಿ ಸೈನಿಕರಿಬ್ಬರು ಗಂಭೀರ ಗಾಯಗೊಂಡರು. ತಕ್ಷಣವೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಯೋಧರೊಬ್ಬರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು’ ಎಂದು ಅವರು ಮಾಹಿತಿ ನೀಡಿದರು.

ಇನ್ನೂ, ಮೃತ ಉಗ್ರ ಯಾವ ಸಂಘಟನೆಗೆ ಸೇರಿದವನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಎನ್‌ಕೌಂಟರ್‌ ನಡೆದ ಪ್ರದೇಶದಲ್ಲಿ ಎ.ಕೆ 47 ರೈಫಲ್‌ ಮತ್ತು ಕೆಲ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು