ಸೋಮವಾರ, ಆಗಸ್ಟ್ 8, 2022
23 °C

ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಿದ ಭದ್ರತಾ ಪಡೆ: ವಿಡಿಯೊ ನೋಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಲಷ್ಕರ್ ಎ ತಯ್ಯಬಾ ಸಂಘಟನೆಯ ಉಗ್ರನನ್ನು ಬಂಧಿಸಿದೆ.

ಬಂಧಿತ ಉಗ್ರನನ್ನು ನಡಿಹಾಲ್ ನಿವಾಸಿ ಮೆಹಬೂಬ್ ಉಲ್ ಇನಾಮ್ ಎಂದು ಗುರುತಿಸಲಾಗಿದೆ. ಇದೇ ಪ್ರದೇಶದಲ್ಲಿ ಎಲ್‌ಇಟಿಯ ಹೈಬ್ರಿಡ್ ಉಗ್ರರನ್ನು ಬಂಧಿಸಿರುವ ಭದ್ರತಾ ಪಡೆ ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಿದೆ. ಡ್ರೋನ್‌ನಿಂದ ಚಿತ್ರೀಕರಿಸಿದ ಅಡಗುದಾಣಗಳ ಧ್ವಂಸದ ವಿಡಿಯೊ ಇಲ್ಲಿದೆ.

ಉಗ್ರರು ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿ, 2 ಕೆ,ಜಿಯಷ್ಟು ಸ್ಫೋಟಕ ಸಾಮಗ್ರಿ, ಮೂರು ಎಕೆ ರೈಫಲ್ಸ್, 10 ಮ್ಯಾಗಜಿನ್, ಚೀನಾದ ಗ್ರೆನೇಡ್ ವಶಕ್ಕೆ ಪಡೆದಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು