ಬುಧವಾರ, ಆಗಸ್ಟ್ 10, 2022
24 °C

ಜಮ್ಮು–ಕಾಶ್ಮೀರ: ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳಿಂದ ಉಗ್ರನ ಹತ್ಯೆ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಮಂಗಳವಾರ ಬೆಳಿಗ್ಗೆ ಹತ್ಯೆ ಮಾಡಿವೆ.

ಸೋಪೊರೆ ಪ್ರದೇಶದಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆಗಳ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾರಾಮುಲ್ಲ, ಸೋಪೊರೆ ಮಾತ್ರವಲ್ಲದೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತುಜ್ಜಾನ್ ಪ್ರದೇಶದಲ್ಲಿಯೂ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದ ಹಲವು ಕಡೆಗಳಲ್ಲಿ ಸರಣಿ ಎನ್‌ಕೌಂಟರ್‌ಗಳು ನಡೆಯುತ್ತಿದ್ದು, ಅನೇಕ ಭಯೋತ್ಪಾದಕರನ್ನು ಮಟ್ಟಹಾಕಲಾಗಿದೆ. ಹೆಚ್ಚಿನ ಕಾರ್ಯಾಚರಣೆಗಳನ್ನು ಗುಪ್ತಚರ ವರದಿಗಳನ್ನು ಆಧರಿಸಿ ಪೊಲೀಸರು ಹಾಗೂ ಸೇನಾ ಪಡೆಗಳು ಜಂಟಿಯಾಗಿ ನಡೆಸಿವೆ.

ಕುಪ್ವಾರ, ಕುಲ್ಗಾಂ ಹಾಗೂ ಪುಲ್ವಾಮ ಜಿಲ್ಲೆಗಳಲ್ಲಿ ಸೋಮವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 7 ಉಗ್ರರನ್ನು ಹತ್ಯೆ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು