ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ (ಎಲ್ಒಸಿ) ಉಗ್ರರ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಿವೆ.
ಕುಪ್ವಾರದ ಎಲ್ಒಸಿಯ ದರ್ಶನ್ ಪೋಸ್ಟ್ ಬಳಿ ಯೋಧರಿಗೆ ಅನುಮಾನಾಸ್ಪದ ಚಲನವಲನ ಕಂಡುಬಂದಿದೆ. ಪ್ರಶ್ನಿಸಿದಾಗ ನುಸುಳುಕೋರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳೂ ಪ್ರತಿ ದಾಳಿ ನಡೆಸಿವೆ. ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ನಸುಳುವಿಕೆ ಯತ್ನ ವಿಫಲಗೊಳಿಸಲಾಗಿದೆ. ಉಳಿದ ಉಗ್ರರ ನಿಗ್ರಹಕ್ಕೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯನ್ನು ಸಮನ್ವಯದಿಂದ ಹಾಗೂ ಸಕ್ರಿಯವಾಗಿ ಆರಂಭಿಸುವಂತೆ ಭದ್ರತಾ ಪಡೆಗಳಿಗೆ ಹಾಗೂ ಪೊಲೀಸರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಸೂಚಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.