ಬುಧವಾರ, ಡಿಸೆಂಬರ್ 7, 2022
23 °C

ಸ್ಮರಣೀಯ ಸ್ವಾಗತಕ್ಕಾಗಿ ಬೆಂಗಳೂರಿಗೆ ಧನ್ಯವಾದಗಳು: ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಣೀಯ ಸ್ವಾಗತ ನೀಡಿದ್ದಕ್ಕಾಗಿ ಬೆಂಗಳೂರಿನ ಜನರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. 

ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅರ್ಧ ದಿನದ ಭೇಟಿಯಲ್ಲೇ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ, ಭಕ್ತ ಕನಕ ದಾಸರು ಮತ್ತು ಮಹರ್ಷಿ ವಾಲ್ಮೀಕಿ ಯವರ ಪ್ರತಿಮೆಗಳಿಗೆ ಮಾಲಾರ್ಪಣೆ, ವೀರವನಿತೆ ಒನಕೆ ಓಬವ್ವ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಮೂಲಕ ಎಲ್ಲ ಸಮುದಾಯಗಳನ್ನೂ ತಲುಪುವ ಪ್ರಯತ್ನವನ್ನು ಪ್ರಧಾನಿ ಮಾಡಿದರು. ಮಾತಿನುದ್ದಕ್ಕೂ ಮಹನೀಯರನ್ನು ಸ್ಮರಿಸುತ್ತಾ, ಚುನಾವಣಾ ಅಖಾಡವನ್ನು ಹಸನುಗೊಳಿಸುವ ಪ್ರಯತ್ನಕ್ಕೆ ಮುನ್ನುಡಿ ಬರೆದರು.

ಈ ಸಮಯದಲ್ಲಿ ಹೋಗುವ ದಾರಿಯಲ್ಲಿ ಕಾರ್ಯಕರ್ತರನ್ನು ಕಂಡು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ ಬಳಿ ಮತ್ತು ಬೆಂಗಳೂರಿನ ಪ್ರಮುಖ ಟ್ರಾಫಿಕ್ ಜಂಕ್ಷನ್‌ನಲ್ಲಿ ತಮ್ಮ ಕಾರನ್ನು ನಿಲ್ಲಿಸಿ ಪಕ್ಷದ ಕಾರ್ಯಕರ್ತರತ್ತ ಕೈ ಬೀಸಿದರು. 

ಈ ವೇಳೆ ಕಾರ್ಯಕರ್ತರು ಮೋದಿ, ಮೋದಿ ಘೋಷಣೆಗಳನ್ನು ಕೂಗುತ್ತಾ ಜೊತೆಗೆ ಬಿಜೆಪಿ ಧ್ವಜಗಳನ್ನು ಹಿಡಿದುಕೊಂಡು ಮೋದಿಯನ್ನು ಸ್ವಾಗತಿಸಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ‘ಈ ಡೈನಾಮಿಕ್ ಸಿಟಿಗೆ ಸ್ಮರಣೀಯ ಸ್ವಾಗತಕ್ಕಾಗಿ ಬೆಂಗಳೂರಿಗೆ ಧನ್ಯವಾದಗಳು‘ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು