ನವದೆಹಲಿ: ‘ನಿರಂತರ ಹಣದುಬ್ಬರದಿಂದಾಗಿ ಹಬ್ಬದ ಸಂಭ್ರಮ ಕಳೆಗುಂದಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಬೇಕು’ ಎಂದು ವ್ಯಂಗ್ಯ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಮೋದಿ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು.
11 ದಿನಗಳಲ್ಲಿ ಪೆಟ್ರೋಲ್ ಬೆಲೆ ₹2.35 ಮತ್ತು ಡೀಸೆಲ್ ಬೆಲೆ ₹3 ಹೆಚ್ಚಾಗಿದ್ದು, ಬೆಲೆ ಏರಿಕೆಯು ಜನಸಾಮಾನ್ಯರ ಪರಿಸ್ಥಿತಿಯನ್ನು ಕಠಿಣಗೊಳಿಸಿದೆ ಎನ್ನುವ ಮಾಧ್ಯಮ ವರದಿಯೊಂದನ್ನು ಉಲ್ಲೇಖಿಸಿ ರಾಹುಲ್ ಟ್ವೀಟ್ ಮಾಡಿದ್ದಾರೆ.
‘ಪೆಟ್ರೋಲ್, ಡೀಸೆಲ್ ಮತ್ತು ಆಹಾರ ಪದಾರ್ಥಗಳು ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆಗಳು ಏರಿಕೆಯಾಗುತ್ತಲೇ ಇವೆ. ಮೋದಿಯವರಿಗೆ ಧನ್ಯವಾದಗಳು. ಹಬ್ಬದ ಉತ್ಸಾಹ ಕಳೆಗುಂದಿದೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಹಾಗೂ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.