ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಮ ಸಡಿಲ: ಇರಲಿ ಎಚ್ಚರ-ಕಳವಳ ವ್ಯಕ್ತಪಡಿಸಿದ ಕೇಂದ್ರ

ಲಸಿಕೆ ಅಭಿಯಾನಕ್ಕೆ ಗಮನ: ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹಸಚಿವಾಲಯ ಸೂಚನೆ
Last Updated 19 ಜೂನ್ 2021, 22:59 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್ ಲಾಕ್‌ಡೌನ್ ನಿಯಮಗಳನ್ನು ಸಡಿಲಗೊಳಿಸುವುದರಿಂದ ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರವು, ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಶನಿವಾರ ಕೆಲವು ಸೂಚನೆಗಳನ್ನು ನೀಡಿದೆ.

ಸೋಂಕು ಹರಡುವಿಕೆಯನ್ನು ತಡೆ
ಗಟ್ಟಲು ಸೂಕ್ತವಾದ ಅಭ್ಯಾಸಗಳನ್ನು ಅನುಸರಿಸುವುದು, ಪರೀಕ್ಷೆ- ಪತ್ತೆ- ಚಿಕಿತ್ಸೆ ಕ್ರಮ ಜಾರಿಗೊಳಿಸುವುದು, ಲಸಿಕೆ ಅಭಿಯಾನ ನಡೆಸುವುದರತ್ತ
ಗಮನಹರಿಸಬೇಕು. ಕೊರೊನಾ ಸರಪಳಿಯನ್ನು ತುಂಡರಿಸಬೇಕಾದರೆ,ಲಸಿಕೆ ಕಾರ್ಯಕ್ರಮ ಅತ್ಯಂತ ಪ್ರಮುಖವಾದುದು ಎಂದು ಕೇಂದ್ರದ ಗೃಹಕಾರ್ಯದರ್ಶಿ ಅಜಯ್ ಭಲ್ಲಾ ಅವರು ಎಲ್ಲ ರಾಜ್ಯಗಳಿಗೆ ಕಳುಹಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ನಿರ್ಬಂಧ ಸಡಿಲಿಸಿ, ವ್ಯಾಪಾರ ಮೊದಲಾದ ಚಟುವಟಿಕೆಗಳಿಗೆ
ಅನುಮತಿ ನೀಡುವ ರಾಜ್ಯ ಸರ್ಕಾರಗಳು, ಇಡೀ ಪ್ರಕ್ರಿಯೆಯನ್ನು ಎಚ್ಚರಿಕೆ
ಯಿಂದ ಗಮನಿಸಬೇಕು. ಕಡ್ಡಾಯವಾಗಿ ಮಾಸ್ಕ್ ಬಳಕೆ, ಕೈಗಳನ್ನು ಶುಚಿಯಾಗಿ ಇರಿಸಿಕೊಳ್ಳುವಿಕೆ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವಿಕೆ ಮೊದಲಾದ ನಡವಳಿಕೆಗಳನ್ನು ಜನರು ಪಾಲಿಸಬೇಕಿದೆ ಎಂದು ಹೇಳಿದರು.

‘ಸೋಂಕು ಪತ್ತೆ ಪರೀಕ್ಷೆಗಳನ್ನು ಕಡಿಮೆ ಮಾಡುವಂತಿಲ್ಲ. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಅಲ್ಪಮಟ್ಟಿಗೆ ತಿಳಿಯಾಗಿದ್ದರೂ, ಸಕ್ರಿಯ ಪ್ರಕರಣಗಳು ಅಥವಾ ಪಾಸಿಟಿವಿಟಿ ದರ ಉಲ್ಬಣವಾದಲ್ಲಿ, ಅವುಗಳ ಆರಂಭಿಕ ಚಿಹ್ನೆಗಳನ್ನು ನಿರ್ಲಕ್ಷಿಸುವಂತಿಲ್ಲ’ ಎಂದಿದ್ದಾರೆ.

ಕೋವಿಡ್ ತಡೆಯಬೇಕಾದರೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಮರೋಪಾದಿಯಲ್ಲಿ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡು ಗರಿಷ್ಠ ಸಂಖ್ಯೆಯ ಜನರಿಗೆ ಲಸಿಕೆ ನೀಡಬೇಕು. ಕೋವಿಡ್ ಎರಡನೇ ಅಲೆಯಲ್ಲಿ ಹಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಕಂಡಿವೆ. ಸೋಂಕು ನಿಯಂತ್ರಿಸಲು ಹಲವು ರಾಜ್ಯಗಳು ನಿರ್ಬಂಧಗಳನ್ನು ವಿಧಿಸಿವೆ.

‘ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದ್ದು, ಅನೇಕ ರಾಜ್ಯಗಳು ನಿರ್ಬಂಧಗಳನ್ನು ಸಡಿಲಿಸಲು ಪ್ರಾರಂಭಿಸಿವೆ. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ನಿರ್ಬಂಧಗಳನ್ನು ಹೇರುವ ಅಥವಾ ಸರಾಗಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಬೇಕಾ
ಗಿದೆ’ ಎಂದು ಭಲ್ಲಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT