ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನಿಗಳ ಬಗ್ಗೆ ದೇಶಕ್ಕೆ ಹೆಮ್ಮೆಯಿದೆ: ಪ್ರಧಾನಿ ನರೇಂದ್ರ ಮೋದಿ

Last Updated 4 ಜನವರಿ 2021, 7:17 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ 'ಮೇಡ್ ಇನ್ ಇಂಡಿಯಾ' ಲಸಿಕೆಗಳನ್ನು ತಯಾರಿಸಲು ಭಾರತೀಯ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಇದರಿಂದ ಇಡೀ ದೇಶವೇ ವಿಜ್ಞಾನಿಗಳ ಬಗ್ಗೆ ಹೆಮ್ಮೆಪಡುವಂತಾಗಿದೆ ಎಂದು ರಾಷ್ಟ್ರೀಯ ಮಾಪನಶಾಸ್ತ್ರ ಸಮಾವೇಶದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ವಿಡಿಯೊ ಕಾನ್ಫೆರನ್ಸ್ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಾಗತಿಕ ಬೇಡಿಕೆ ಮಾತ್ರವಲ್ಲದೆ 'ಮೇಕ್ ಇನ್ ಇಂಡಿಯಾ' ಉತ್ಪನ್ನಗಳಿಗೆ ಜಾಗತಿಕ ಸ್ವೀಕಾರವೂ ಇದೆ ಎಂಬುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಗುಣಮಟ್ಟ ಮತ್ತು ವಿಶ್ವಾಸಾರ್ಹತೆಯ ಆಧಾರದಲ್ಲಿ ನಾವು 'ಬ್ರ್ಯಾಂಡ್ ಇಂಡಿಯಾ'ವನ್ನು ಬಲಪಡಿಸಬೇಕು ಎಂದು ಹೇಳಿದ್ದಾರೆ.

ಇಂದು, ಜಾಗತಿಕ ನಾವೀನ್ಯತೆಯ ಶ್ರೇಯಾಂಕದಲ್ಲಿ ಅಗ್ರ 50ರಲ್ಲಿ ಭಾರತ ಗುರುತಿಸಿಕೊಂಡಿದೆ. ದೇಶದಲ್ಲಿ ಉದ್ಯಮ ಹಾಗೂ ಸಂಸ್ಥೆಗಳ ನಡುವಣ ಸಹಯೋಗವನ್ನು ಬಲಪಡಿಸಲಾಗುತ್ತಿದೆ ಎಂದು ಹೇಳಿದರು.

ಯಾವುದೇ ಸಂಶೋಧನೆಯ ಪ್ರಭಾವವು ವಾಣಿಜ್ಯ ಹಾಗೂ ಸಾಮಾಜಿಕವಾಗಿದ್ದು ನಮ್ಮ ತಿಳುವಳಿಕೆಯನ್ನು ವಿಸ್ತರಿಸುತ್ತದೆ. ಅನೇಕ ಬಾರಿ ಸಂಭನೀಯ ಭವಿಷ್ಯದ ಉಪಯೋಗಗಳನ್ನು ಮುಂಚಿತವಾಗಿ ಅಂದಾಜಿಸಲು ಸಾಧ್ಯವಿಲ್ಲ. ಆದರೆ ಸಂಶೋಧನೆಯು ಎಂದಿಗೂ ವ್ಯರ್ಥವಾಗುವುದಿಲ್ಲ ಎಂಬುದು ಖಚಿತ. ವೇದಗಳಲ್ಲಿ ಹೇಳಿದಂತೆ 'ಆತ್ಮವು ಅಮರ'. ಹಾಗೆಯೇ 'ಸಂಶೋಧನೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT