ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಭಾರತಕ್ಕೆ ಬಂದ ಅಮೆರಿಕದ ವೈದ್ಯಕೀಯ ನೆರವು

Last Updated 30 ಏಪ್ರಿಲ್ 2021, 5:38 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ವೈದ್ಯಕೀಯ ಪರಿಹಾರ ಸಾಮಗ್ರಿಗಳನ್ನು ರವಾನಿಸುವ ಮೂಲಕ ಅಮೆರಿಕ ಸಹಾಯ ಹಸ್ತ ಚಾಚಿದೆ.

ಟ್ರಾವಿಸ್‌ ವಾಯುನೆಲೆಯಿಂದ ಪ್ರಯಾಣ ಆರಂಭಿಸಿದ್ದ ವಿಶ್ವದ ಬೃಹತ್‌ ಯುದ್ಧವಿಮಾನವು ₹740 ಕೋಟಿ ಮೌಲ್ಯದ (100 ದಶಲಕ್ಷ ಡಾಲರ್‌) ಪರಿಹಾರ ಸಾಮಗ್ರಿಗಳನ್ನು ಹೊತ್ತ ಶುಕ್ರವಾರ ಬೆಳಿಗ್ಗೆ ಭಾರತಕ್ಕೆ ಬಂದಿಳಿದಿದೆ.

‘ಅಮೆರಿಕದಿಂದ ಹಲವಾರು ತುರ್ತು ಕೋವಿಡ್‌ ಪರಿಹಾರ ಸಾಮಗ್ರಿಗಳನ್ನು ಹೊತ್ತ ಮೊದಲ ವಿಮಾನ ಭಾರತಕ್ಕೆ ಬಂದಿದೆ. 70 ವರ್ಷಗಳ ಸಹಕಾರವನ್ನು ಆಧರಿಸಿ ನಾವು (ಅಮೆರಿಕ) ಕೋವಿಡ್‌ ಪಿಡುಗಿನ ವಿರುದ್ಧ ಒಟ್ಟಾಗಿ ಹೋರಾಟ ನಡೆಸಲು ಭಾರತದೊಂದಿಗೆ ನಿಂತಿದ್ದೇವೆ’ ಎಂದು ಭಾರತೀಯ ರಾಯಭಾರಿ ಕಚೇರಿ ಟ್ವೀಟ್‌ ಮಾಡಿದೆ.

ಭಾರತಕ್ಕೆ ರಷ್ಯಾ, ಕೆನಡಾ, ದುಬೈ ಸೇರಿದಂತೆ ಹಲವು ಜಾಗತಿಕ ರಾಷ್ಟ್ರಗಳು ನೆರವು ನೀಡಲು ಮುಂದಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT