ಮಂಗಳವಾರ, ಮಾರ್ಚ್ 21, 2023
25 °C

ಕೊನೆಯ ಬಾರಿಗೆ ಕರ್ತವ್ಯ ಪಥದಲ್ಲಿ ಹಾರಾಟ ನಡೆಸಿದ IL-38 ವಿಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತೀಯ ನೌಕಪಡೆಯ ಐಎಲ್ 38 ವಿಮಾನವು 74ನೇ ಗಣರಾಜ್ಯೋತ್ಸವದಂದು ಮೊದಲ ಮತ್ತು ಕೊನೆಯ ಬಾರಿಗೆ ಕರ್ತವ್ಯ ಪಥದಲ್ಲಿ ಹಾರಾಟ ನಡೆಸಿತು.

ದೇಶಕ್ಕೆ 44 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಐಎಲ್ 38 ವಿಮಾನ ಕೊನೆಯ ಬಾರಿಗೆ ಕರ್ತವ್ಯ ಪಥದಲ್ಲಿ ಹಾರಾಟ ನಡೆಸಿದೆ.

1977ರಲ್ಲಿ ಈ ವಿಮಾನ ನೌಕಾಪಡೆಗೆ ಸೇರ್ಪಡೆಗೊಂಡಿತ್ತು. ಕಡಲ ಕಣ್ಗಾವಲು ಕಾರ್ಯಾಚರಣೆಗಳಲ್ಲಿ ಈ ವಿಮಾನ ನಿರ್ಣಾಯಕ ಪಾತ್ರವಹಿಸಿತ್ತು. ಕಳೆದ ವರ್ಷ ಜನವರಿಯಲ್ಲಿ ಈ ವಿಮಾನದ ಬಳಕೆಯನ್ನು ನಿಲ್ಲಿಸಲಾಗಿದೆ.

ಗಣರಾಜ್ಯೋತ್ಸವದ ಫ್ಲೈ-ಪಾಸ್ಟ್‌ನಲ್ಲಿ ಈ ವಿಮಾನ ಸೇರಿದಂತೆ, ಭಾರತೀಯ ವಾಯುಪಡೆಯ ವಿಮಾನಗಳು, ನೌಕಾಪಡೆಯ ಒಂದು ವಿಮಾನ, ಭೂ ಸೇನೆಯ ನಾಲ್ಕು ಹೆಲಿಕಾಪ್ಟರ್‌ಗಳು ಇದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು