ಬೆಂಗಳೂರು: ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಜಾರಿಯಲ್ಲಿದ್ದ ಕೋವಿಡ್–19 ನಿರ್ಬಂಧಗಳನ್ನು ಸಡಿಲಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಸಮಿತಿ ನಿರ್ಧರಿಸಿದೆ. ಹತ್ತು ವರ್ಷಕ್ಕಿಂತ ಕೆಳಗಿನ ಮಕ್ಕಳು, 65 ವರ್ಷದ ದಾಟಿದವರು ಮತ್ತು ಗರ್ಭಿಣಿಯರಿಗೆ ತಿರುಪತಿ ತಿಮ್ಮಪ್ಪ ದರ್ಶನಕ್ಕೆ ಇದ್ದ ನಿರ್ಬಂಧವನ್ನು ತೆಗೆಯಲಾಗಿದೆ.

ಕೋವಿಡ್–19 ತಡೆಗಾಗಿ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿ ಅನ್ವಯ ದರ್ಶನಕ್ಕೆ ಮಾರ್ಚ್ 20ರಿಂದ ಅವಕಾಶ ಇರಲಿಲ್ಲ. ಆದರೆ, 10ರಿಂದ 65 ವರ್ಷದ ಒಳಗಿನವರಿಗೆ ಜೂನ್‌ನಿಂದ ದರ್ಶನಕ್ಕೆ ಅವಕಾಶ ಕೊಡಲಾಗಿತ್ತು. ದರ್ಶನಕ್ಕೆ ಎಲ್ಲರಿಗೂ ಅವಕಾಶ ನೀಡಬೇಕು ಎಂದು ಇ–ಮೇಲ್ ಮೂಲಕ ಬಹಳಷ್ಟು ಜನರಿಂದ ಬೇಡಿಕೆ ಬಂದಿದೆ. ಹಾಗಾಗಿ, ನಿರ್ಬಂಧವನ್ನು ಸಡಿಲಿಸಲಾಗಿದೆ ಎಂದು ಟಿಟಿಡಿ ತಿಳಿಸಿದೆ.

ದರ್ಶನದ ಇಚ್ಛೆ ಇರುವವರು ಈಗ ಇರುವ ನಿಯಮಗಳ ಅನುಸಾರ, ಆನ್‌ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಬೇಕು. ಕೋವಿಡ್–19 ತಡೆ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ವಯಸ್ಸಾದವರು, ಮಕ್ಕಳು ಮತ್ತು ಗರ್ಭಿಣಿಯರಿಗೆ ಪ್ರತ್ಯೇಕ ಸರದಿ ವ್ಯವಸ್ಥೆ ಇಲ್ಲ ಎಂದು ಟಿಟಿಡಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.