ಮಂಗಳವಾರ, ಮೇ 18, 2021
31 °C

ಕೋವಿಡ್‌: ಮೊದಲ ದಿನ 18–44 ವರ್ಷ ವಯಸ್ಸಿನ 80 ಸಾವಿರ ಜನರಿಗೆ ಲಸಿಕೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಾದ್ಯಂತ ಮೇ 1ರಿಂದ 18–44 ವರ್ಷ ವಯಸ್ಸಿನವರಿಗೆ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನ ಒಟ್ಟು 84,599 ಜನರು ಲಸಿಕೆಯ ಮೊದಲ ಡೋಸ್‌ ಹಾಕಿಸಿಕೊಂಡಿದ್ದಾರೆ.

ಶನಿವಾರ ರಾತ್ರಿ 8ರವರೆಗೂ ಒಟ್ಟು 16,48,192 ಡೋಸ್‌ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಕೋವಿಡ್‌ ಲಸಿಕೆ ಅಭಿಯಾನ ಶುರುವಾಗಿ 106 ದಿನಗಳು ಕಳೆದಿವೆ.

18ರಿಂದ 44 ವರ್ಷ ವಯಸ್ಸಿನ 84,599 ಮಂದಿ ಮೊದಲ ಡೋಸ್‌ ಲಸಿಕೆ ಹಾಕಿಸಿಕೊಂಡಿದ್ದು, ಇದೇ ಅವಧಿಯಲ್ಲಿ ಒಟ್ಟು 9,89,700 ಜನರು ಮೊದಲ ಡೋಸ್‌ ಲಸಿಕೆ ಹಾಕಿಸಿಕೊಂಡಿದ್ದಾರೆ. 6.58 ಲಕ್ಷಕ್ಕೂ ಹೆಚ್ಚು ಜನರು ಎರಡನೇ ಡೋಸ್‌ ಲಸಿಕೆ ಹಾಕಿಸಿಕೊಂಡಿರುವುದು ಸಚಿವಾಲಯದ ವರದಿಯಿಂದ ತಿಳಿದು ಬಂದಿದೆ.

ದೇಶದಲ್ಲಿ ಒಟ್ಟು 15.66 ಕೋಟಿ ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ 5.26 ಕೋಟಿ ಜನರು ಮೊದಲ ಡೋಸ್‌ ತೆಗೆದುಕೊಂಡಿದ್ದರೆ, 1.14 ಕೋಟಿ ಜನರು ಎರಡನೇ ಡೋಸ್ ಹಾಕಿಸಿಕೊಂಡಿದ್ದಾರೆ.

45ರಿಂದ 60 ವರ್ಷ ವಯಸ್ಸಿನವರಲ್ಲಿ ಈವರೆಗೆ 5.33 ಕೋಟಿ ಜನರು ಮೊದಲ ಡೋಸ್‌ ಲಸಿಕೆ ಹಾಕಿಸಿಕೊಂಡಿದ್ದರೆ, 40 ಲಕ್ಷ ಜನರು ಎರಡನೇ ಡೋಸ್‌ ಹಾಕಿಸಿಕೊಂಡಿದ್ದಾರೆ.

ಮೇ 1ರಿಂದ ದೇಶದಲ್ಲಿ ಮೂರನೇ ಹಂತದ ಲಸಿಕೆ ಕಾರ್ಯಕ್ರಮ ಆರಂಭವಾಗಿದೆ. ಸ್ವಯಂ ಸೇವಕರು ಮತ್ತು ಎನ್‌ಜಿಒಗಳನ್ನು ಬಳಸಿ ಸಹಾಯ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು