ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ದೇಗುಲಗಳಿಗೆ ಸಮಿತಿ ನೇಮಕ ಮಾಡಿದ್ದನ್ನು ಪರಿಶೀಲಿಸಲು ಸುಪ್ರೀಂ ಒಪ್ಪಿಗೆ

ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಾಲಯ
Last Updated 12 ಜುಲೈ 2021, 13:48 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನ ಮೂರು ಪುರಾತನ ದೇವಾಲಯಗಳಿಗೆ ವ್ಯವಸ್ಥಾಪಕ ಸಮಿತಿಗಳನ್ನು ನೇಮಿಸುವ ಮೂಲಕ ಕರ್ನಾಟಕ ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿರ್ಧಾರವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್‌ ಸೋಮವಾರ ತಿಳಿಸಿದೆ.

ನ್ಯಾಯಮೂರ್ತಿಗಳಾದ ಯು.ಯು. ಲಲಿತ್‌ ಮತ್ತು ಅಜಯ್‌ ರಸ್ತೋಗಿ ಅವರನ್ನೊಳಗೊಂಡ ಪೀಠವು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ಎಂ. ಪ್ರಶಾಂತ್‌ ಮತ್ತು ಇತರರ ಪರವಾಗಿ ವಕೀಲ ಬಾಲಾಜಿ ಶ್ರೀನಿವಾಸನ್‌ ಅವರು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ.

ಬೆಂಗಳೂರಿನ ಆಂಜನೇಯ ಸ್ವಾಮಿ ದೇವಾಲಯ, ಚನ್ನರಾಯಸ್ವಾಮಿ ದೇವಾಲಯ ಮತ್ತು ವೆಂಕಟರಾಮಣಸ್ವಾಮಿ ದೇವಾಲಯದ ಪ್ರಧಾನ ಅರ್ಚಕರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಇತರರು.

ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ಚಾರಿಟಬಲ್‌ ಸಂಸ್ಥೆ ತಿದ್ದುಪಡಿ ಕಾಯ್ದೆ–2021ರ ಸೆಕ್ಷನ್‌ 25ರ ಅನ್ವಯ ವ್ಯವಸ್ಥಾಪಕ ಸಮಿತಿಗಳನ್ನು ರಚಿಸಿ ಕರ್ನಾಟಕ ಸರ್ಕಾರ 2021ರ ಮಾರ್ಚ್‌ 21ರಂದು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ‘ಸಿ’ ವಿಭಾಗದಲ್ಲಿ 137 ದೇವಾಲಯಗಳಿವೆ. ಆದರೆ, ಸರ್ಕಾರದ ಬೆಂಗಳೂರು ಪೂರ್ವ ತಾಲ್ಲೂಕಿನ ಮೂರು ದೇವಾಲಯಗಳಿಗೆ ಮಾತ್ರ ಆದೇಶ ಹೊರಡಿಸಿದೆ ಎಂದು ಅರ್ಜಿದಾರರು ದೂರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT