ಬುಧವಾರ, ಜೂನ್ 16, 2021
28 °C

ಆ್ಯಂಬುಲೆನ್ಸ್‌ ಸಂಚಾರಕ್ಕೆ ನಿರ್ಬಂಧ ಬೇಡ: ತೆಲಂಗಾಣ ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಕೋವಿಡ್‌–19 ರೋಗಿಗಳನ್ನು ಸಾಗಿಸುವ ನೆರೆಯ ರಾಜ್ಯಗಳ ಆ್ಯಂಬುಲೆನ್ಸ್‌ಗಳ ಸಂಚಾರಕ್ಕೆ ನಿರ್ಬಂಧ ವಿಧಿಸದಂತೆ ತೆಲಂಗಾಣ ಹೈಕೋರ್ಟ್‌ ಶುಕ್ರವಾರ, ತೆಲಂಗಾಣ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಾಲಯದ ಈ ಆದೇಶದಿಂದ ಕೋವಿಡ್‌–19 ರೋಗಿಗಳು ಅಲ್ಪಮಟ್ಟಿಗೆ ನಿರಾಳರಾಗಿದ್ದಾರೆ. ಪ್ರಮುಖವಾಗಿ ಆಂಧ್ರಪ್ರದೇಶದ ರೋಗಿಗಳು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಇದ್ದ ತೊಡಕು ನಿವಾರಣೆಯಾಗಿದೆ.

‘ಆಂಬ್ಯುಲೆನ್ಸ್‌ಗಳನ್ನು ತಡೆಯುವ ಹಕ್ಕನ್ನು ಯಾರು ನೀಡಿದ್ದಾರೆ’ ಎಂದು ತೆಲಂಗಾಣ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ ಪ್ರಶ್ನಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು