ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಎರಡನೇ ಹಂತದ 100 ವೆಂಟಿಲೇಟರ್‌ಗಳನ್ನು‌ ಹಸ್ತಾಂತರಿಸಿದ ಅಮೆರಿಕ

Last Updated 19 ಆಗಸ್ಟ್ 2020, 15:57 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವಿರುದ್ಧದ ಹೋರಾಟದ ಭಾಗವಾಗಿ ಭಾರತಕ್ಕೆ ಎರಡನೇ ಹಂತದ 100 ವೆಂಟಿಲೇಟರ್‌ಗಳನ್ನು ಅಮೆರಿಕ ಬುಧವಾರ ಹಸ್ತಾಂತರಿಸಿದೆ.

‘ಯುಎಸ್ ಏಜೆನ್ಸಿ ಫಾರ್ ಇಂಟರ್‌ನ್ಯಾಷನಲ್ ಡೆವೆಲಪ್‌ಮೆಂಟ್ (ಯುಎಸ್‌ಎಐಡಿ) ಮೂಲಕ ಭಾರತ ಸರ್ಕಾರ ಮತ್ತು ರೆಡ್‌ ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ವೆಂಟಿಲೇಟರ್‌ಗಳನ್ನು ಹಸ್ತಾಂತರಿಸಲಾಗಿದೆ ಎಂದು ಅಮೆರಿಕ ರಾಯಭಾರ ಕಚೇರಿ ತಿಳಿಸಿದೆ.

‘ಎರಡನೇ ಹಂತದಲ್ಲಿ 100 ವೆಂಟಿಲೇಟರ್‌ಗಳನ್ನು ಭಾರತಕ್ಕೆ ಹಸ್ತಾಂತರಿಸಲು ಸಂತಸವಾಗುತ್ತಿದೆ. ಸಾಂಕ್ರಾಮಿಕದ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಇವುಗಳನ್ನು ನೀಡುವ ಮೂಲಕ ಈ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಂದಿದ್ದ ಬದ್ಧತೆಯನ್ನು ಪೂರೈಸಿದಂತಾಗಿದೆ’ ಎಂದು ಅಮೆರಿಕ ರಾಯಭಾರಿ ಕೆನ್ನೆತ್ ಐ ಜಸ್ಟರ್ ಹೇಳಿದ್ದಾರೆ.

ಅಮೆರಿಕದಲ್ಲೇ ತಯಾರಿಸಲಾಗಿರುವ ಈ ವೆಂಟಿಲೇಟರ್‌ಗಳು ಸುಲಭವಾಗಿ ನಿರ್ವಹಿಸಬಲ್ಲವುಗಳಾಗಿವೆ. ಕೊರೊನಾ ಸೋಂಕಿತರ ಚಿಕಿತ್ಸೆಯಲ್ಲಿ ಭಾರತಕ್ಕೆ ನೆರವಾಗಲಿವೆ ಎಂದೂ ಅವರು ಹೇಳಿದ್ದಾರೆ.

ಕೋವಿಡ್‌–19 ವಿರುದ್ಧದ ಹೋರಾಟಕ್ಕಾಗಿ ಭಾರತಕ್ಕೆ 200 ವೆಂಟಿಲೇಟರ್‌ಗಳನ್ನು ಕೊಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ ತಿಂಗಳಲ್ಲಿ ಘೋಷಿಸಿದ್ದರು. ಜೂನ್ 16ರಂದು ಮೊದಲ ಹಂತದ 100 ವೆಂಟಿಲೇಟರ್‌ಗಳನ್ನು ಹಸ್ತಾಂತರಿಸಲಾಗಿತ್ತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT