ಬುಧವಾರ, ಸೆಪ್ಟೆಂಬರ್ 22, 2021
25 °C

ಕೋವಿಡ್‌ ಲಸಿಕೆಗೂ ಶಾಲೆ ಆರಂಭಕ್ಕೂ ಸಂಬಂಧವಿಲ್ಲ: ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಶಾಲೆಗಳನ್ನು ಮತ್ತೆ ಆರಂಭಿಸುವುದಕ್ಕೆ ಮಕ್ಕಳು ಕೋವಿಡ್‌ ಲಸಿಕೆ ಪಡೆದಿರಬೇಕು ಎಂಬ ಷರತ್ತನ್ನು ಯಾರೂ ವಿಧಿಸಿಲ್ಲ’ ಎಂದು ಕೇಂದ್ರ ದ ಹಿರಿಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆಫ್‌ಲೈನ್‌ ತರಗತಿಗಳನ್ನು ಆರಂಭಿಸುವ ಕುರಿತು ದ್ವಂದ್ವ ನಿಲುವು ಹೊಂದಿರುವ ರಾಜ್ಯಗಳಿಗೆ ಇದು ಭರವಸೆ ನೀಡಿದೆ.

ಈ ರೀತಿಯ ಷರತ್ತನ್ನು ಯಾವುದೇ ವೈಜ್ಞಾನಿಕ ಸಂಸ್ಥೆ, ಸಾಂಕ್ರಾಮಿಕ ರೋಗಶಾಸ್ತ್ರಜ್ಞರ ಸಂಘಗಳಾಗಲಿ ಹಾಕಿಲ್ಲ ಎಂದು ಅವರು ಹೇಳಿದ್ದಾರೆ.

‘ಆದರೆ, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿ ಸಂಪೂರ್ಣವಾಗಿ ಲಸಿಕೆ ಪಡೆದಿರಬೇಕು. ಅದೇ ರೀತಿ ಶಾಲೆಗೆ ಹೋಗುವ ಮಕ್ಕಳ ಪೋಷಕರೂ ಲಸಿಕೆ ಹಾಕಿಸಿಕೊಳ್ಳುವುದು ಸೂಕ್ತ’ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್‌ ಹೇಳಿದ್ದಾರೆ. ಅವರು ಕೋವಿಡ್ ಪಿಡುಗಿನ ಕುರಿತು ಸರ್ಕಾರದ ಪ್ರಧಾನ ಸಲಹೆಗಾರರೂ ಆಗಿದ್ದಾರೆ.

ಶಾಲೆಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲಿಸಬೇಕು. ಪರಸ್ಪರ ಅಂತರ ಕಾಯ್ದುಕೊಳ್ಳುವುದಕ್ಕೆ ಪೂರಕವಾಗಿ ಆಸನ ವ್ಯವಸ್ಥೆ ಕಲ್ಪಿಸುವುದೂ ಸೇರಿದಂತೆ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್‌ಒಪಿ) ಅನುಸರಿಸಬೇಕು ಎಂದು ಸರ್ಕಾರ ಹೇಳಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.

ಮಕ್ಕಳನ್ನು ಶಾಲೆಗೆ ಕಳುಹಿಸುವ ಮೊದಲು ಲಸಿಕೆ ಹಾಕಿಸಿರಬೇಕು ಎಂಬುದಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆಯಿಂದಲೂ ಯಾವುದೇ ಶಿಫಾರಸು ಇಲ್ಲ ಎಂದಿರುವ ಅವರು, ಮಕ್ಕಳಿಗೆ ನೀಡುವಂತಹ ಲಸಿಕೆ ಅಭಿವೃದ್ಧಿಗಾಗಿ ದೇಶವು ಉಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದಿದ್ದಾರೆ.

ಕೇರಳ ಮತ್ತು ಈಶಾನ್ಯ ರಾಜ್ಯಗಳಲ್ಲಿನ 35 ಜಿಲ್ಲೆಗಳಲ್ಲಿ ವಾರಕ್ಕೆ ಕೋವಿಡ್‌ ಪಾಸಿಟಿವಿಟಿ ದರ ಶೇ 10ರಷ್ಟಿದೆ. ಅಲ್ಲದೆ 30 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ 5ರಿಂದ 10ರೊಳಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು