ನವದೆಹಲಿ: ನಾನುಚೀನಾಗೆ ಹಿಂತಿರುಗುವುದರಲ್ಲಿ ಯಾವುದೇ ಅರ್ಥವಿಲ್ಲ, ನಾನು ಭಾರತಕ್ಕೆ ಆದ್ಯತೆ ನೀಡುತ್ತೇನೆ. ಇದು ಅತ್ಯುತ್ತಮ ಸ್ಥಳವಾಗಿದೆ ಎಂದುಟಿಬೆಟ್ನ ಧರ್ಮಗುರು ದಲೈಲಾಮಾ ಹೇಳಿದ್ದಾರೆ.

ದಲೈಲಾಮಾ ಅಚರ ಹೇಳಿಕೆಯನ್ನು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಹಿಮಾಚಲ ಪ್ರದೇಶದ ಕಾಂಗ್ರಾ ನನ್ನ ‘ಶಾಶ್ವತ ನಿವಾಸ‘ ಎಂದು ಒತ್ತಿ ಹೇಳಿರುವ ದಲೈಲಾಮಾ, ಚೀನಾಕ್ಕೆ ಮರಳುವುದರ ಬಗ್ಗೆ ಚಿಂತಿಸುವುದಿಲ್ಲ, ಭಾರತವೇ ನನ್ನ ಶಾಶ್ವತ ನೆಲೆ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಯುರೋಪ್, ಆಫ್ರಿಕಾ ಮತ್ತು ಏಷ್ಯಾ ದೇಶಗಳಲ್ಲಿ ಗಡಿ, ಜನಾಂಗ, ಧರ್ಮದ ವಿಚಾರದಲ್ಲಿ ಸುಧಾರಣೆಗಳು ಕಂಡುಬರುತ್ತಿವೆ. ಚೀನಾ ಕೂಡ ಇದಕ್ಕೆ ಹೊಂದಿಕೊಳ್ಳುತ್ತಿದೆ. ಆದರೆ ನಾನು ಮತ್ತೆ ಚೀನಾಕ್ಕೆ ಹಿಂತಿರುಗುವುದರಲ್ಲಿ ಯಾವುದೇ ಅರ್ಥವಿಲ್ಲ,ನಾನು ಭಾರತಕ್ಕೆ ಆದ್ಯತೆ ನೀಡುತ್ತೇನೆ ಎಂದು ಹೇಳಿದರು.

ಇತ್ತೀಚೆಗೆ ತವಾಂಗ್ನಲ್ಲಿ ಚೀನಾ ಮತ್ತು ಭಾರತದ ಸೈನಿಕರ ನಡುವಿನ ಸಂಘರ್ಷದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.