ಶನಿವಾರ, ಜನವರಿ 29, 2022
19 °C

ಅಂತರರಾಷ್ಟ್ರೀಯ ವಿಮಾನ ಸೇವೆ 15ರಿಂದ ಮರು ಆರಂಭ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಮಾನ ಸೇವೆ

ನವದೆಹಲಿ: ಅಂತರರಾಷ್ಟ್ರೀಯ ವಿಮಾನ ಸೇವೆಯನ್ನು ಡಿ.15ರಿಂದ ಪುನರಾರಂಭ ಮಾಡದಿ ರಲು ಕೇಂದ್ರ ಸರ್ಕಾರ ಬುಧವಾರ ನಿರ್ಧರಿಸಿದೆ. ಡಿ. 15ರಿಂದ ಅಂತರರಾಷ್ಟ್ರೀಯ ವಿಮಾನ ಸೇವೆ ಪುನರಾರಂಭಿಸಲು ಕೆಲವೇ ದಿನಗಳ ಹಿಂದೆ ನಿರ್ಧರಿಸಲಾಗಿತ್ತು. ಆದರೆ, ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್‌ ವಿವಿಧ ದೇಶಗಳಲ್ಲಿ ಪತ್ತೆಯಾಗಿ, ಅದರ ಬಗ್ಗೆ ಕಳವಳ ತೀವ್ರವಾದ ಕಾರಣದಿಂದ ವಿಮಾನ ಸೇವೆ ಪುನರಾರಂಭದ ನಿರ್ಧಾ ರವನ್ನು ಮರುಪರಿಶೀಲಿಸಲಾಗಿದೆ. 

ಅಂತರರಾಷ್ಟ್ರೀಯ ವಿಮಾನ ಸೇವೆಯನ್ನು ಯಾವಾಗ ಆರಂಭಿಸಲಾಗು ವುದು ಎಂಬುದನ್ನು ಮುಂದೆ ತಿಳಿಸ ಲಾಗುವುದು ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶನಾಲಯವು ಹೇಳಿದೆ. ಕೊರೊನಾ ಸಾಂಕ್ರಾಮಿಕದ ಕಾರಣದಿಂದಾಗಿ 2020ರ ಮಾರ್ಚ್‌ 23ರಿಂದ ಅಂತರರಾಷ್ಟ್ರೀಯ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. 

ವಿಮಾನ ಸೇವೆಯನ್ನು ಪುನರಾರಂ ಭಿಸುವ ನಿರ್ಧಾರವನ್ನು ನ. 26ರಂದು ಪ್ರಕಟಿಸಲಾಗಿತ್ತು. ಆದರೆ, ಓಮೈಕ್ರಾನ್‌ ಪ್ರಕರಣಗಳು ದೃಢಪಟ್ಟ ಕಾರಣ, ಈ ನಿರ್ಧಾರವನ್ನು ಮರುಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದರು.

ಕೇಂದ್ರದೊಂದಿಗೆ ಇಂದು ಬೊಮ್ಮಾಯಿ ಚರ್ಚೆ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ದೆಹಲಿಗೆ ಭೇಟಿ ನೀಡಲಿದ್ದು, ಆರೋಗ್ಯ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ನೀಡುವ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಅವರೊಂದಿಗೆ ಚರ್ಚಿಸಲಿದ್ದಾರೆ.

ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು ‘ಬೂಸ್ಟರ್‌ ಡೋಸ್ ನೀಡುವ ಬಗ್ಗೆ ಕೇಂದ್ರದ ಅನಿಸಿಕೆ ಪಡೆಯಲಾಗುವುದು. ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ರಾಜ್ಯ ಕಾರ್ಯಪಡೆಯ ಸಭೆಯಲ್ಲಿ ಕನಿಷ್ಠ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ನೀಡಬಹುದು ಎನ್ನುವ ಅಭಿಪ್ರಾಯ ತಜ್ಞರಿಂದ ವ್ಯಕ್ತವಾಗಿದೆ. ಇದರ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸುವೆ’ ಎಂದು ತಿಳಿಸಿದರು.

ಪ್ರಯಾಣಿಕರ ಮಾಹಿತಿ

ದೇವನಹಳ್ಳಿ: ‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರ ಸಂಪೂರ್ಣ ಮಾಹಿತಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

* ಕೋವಿಡ್‌ ಎರಡನೇ ಡೋಸ್‌ ಲಸಿಕೆ ಹಾಕಿಸಿ ಕೊಳ್ಳಲು ಸಾರ್ವಜನಿಕರ ಮನವೊಲಿಸಲಾಗುತ್ತದೆಯೇ ಹೊರತು ಕಠಿಣ ಕ್ರಮ ತೆಗೆದುಕೊಳ್ಳುವುದಿಲ್ಲ.

- ಡಾ.ಕೆ.ಸುಧಾಕರ್‌, ಆರೋಗ್ಯ ಸಚಿವ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು