ಮಂಗಳವಾರ, ಜನವರಿ 26, 2021
15 °C

ಕೇಂದ್ರ ಸರ್ಕಾರದಲ್ಲಿ ಒಬ್ಬನೇ ಒಬ್ಬ ರೈತ ಪ್ರತಿನಿಧಿಯೂ ಇಲ್ಲ: ಸಚಿನ್ ಪೈಲಟ್

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ (ರಾಜಸ್ಥಾನ): ಹೊಸ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಅಲ್ಲದೆ ಈ ವಿವಾದಿತ ಕಾನೂನು ಜಾರಿಗೆ ತರುವ ಮೊದಲು ರೈತರು ಅಥವಾ ಯಾವುದೇ ರಾಜ್ಯ ಸರ್ಕಾರಗಳ ಜೊತೆಗೆ ಕೇಂದ್ರವು ಚರ್ಚಿಸಿಲ್ಲ ಎಂದು ಆಪಾದಿಸಿದರು.

ಟೊಂಕ್‌ನಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಸಚಿನ್ ಪೈಲಟ್, ಕೇಂದ್ರ ಸರ್ಕಾರದಲ್ಲಿ ಒಬ್ಬನೇ ಒಬ್ಬ ರೈತ ಪ್ರತಿನಿಧಿಯೂ ಇಲ್ಲ ಮತ್ತು ರೈತರ ದುಃಸ್ಥಿತಿಯ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಆರೋಪಿಸಿದರು.

ಆರ್ಥಿಕತೆಯು ಕುಸಿಯುತ್ತಿದೆ, ಪೆಟ್ರೋಲ್-ಡೀಸೆಲ್ ಬೆಲೆ ಗನನಕ್ಕೇರುತ್ತಿದೆ, ಸಿಲಿಂಡರ್ ಬೆಲೆ ಏರಿಕೆಯಾಗುತ್ತಿದೆ. ಹಣದುಬ್ಬರ ಹೆಚ್ಚಳವಾಗುತ್ತಿದೆ, ನಿರುದ್ಯೋಗ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರವು ರೈತರಿಗೆ ಹೊಡೆತ ನೀಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: 

ಇದೇ ಮೊದಲ ಬಾರಿಗೆ ವಿವಿಧ ವಿರೋಧ ಪಕ್ಷಗಳು ಒಗ್ಗೂಡಿ, ಕೇಂದ್ರ ಸರ್ಕಾರ ರೈತ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತಿದೆ. ಇವುಗಳನ್ನು ಜಾರಿಗೆ ತರುವ ಮೊದಲು ಸರ್ಕಾರವು ರೈತರು ಅಥವಾ ಯಾವುದೇ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆ ನಡೆಸಿಲ್ಲ ಎಂದು ಆರೋಪಿಸಿದರು.

ಪಕ್ಷದ 'ಕಿಸಾನ್ ಬಚಾವೊ, ದೇಶ್ ಬಚಾವೊ' ಅಭಿಯಾನದಡಿಯಲ್ಲಿ ಸಚಿನ್ ಪೈಲಟ್, ಹಲವು ವೇದಿಕೆಗಳಲ್ಲಿ ರೈತರೊಂದಿಗೆ ಸಂವಾದ ನಡೆಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು