ಮಂಗಳವಾರ, ಅಕ್ಟೋಬರ್ 27, 2020
28 °C

ಆದಾಯ ತೆರಿಗೆ ಇಲಾಖೆ ನೋಟಿಸ್‌ | ಕೆಲವರ ಮೇಲೆ ಅವರಿಗೆ ಪ್ರೀತಿ: ಪವಾರ್‌ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಎನ್‌ಸಿಪಿ ಮುಖಂಡ ಶರದ್‌ ಪವಾರ್‌ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್‌ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ್ದು  ಅವರಿಗೆ ( ಕೇಂದ್ರ ಸರ್ಕಾರ) ಕೆಲವರ ಮೇಲೆ ಬಹಳ ಪ್ರೀತಿ ಹಾಗಾಗಿ ಇದೆಲ್ಲ ಎಂದು ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ಸೊಲ್ಲಡಗಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಕಳೆದ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯ ಖರ್ಚು ವೆಚ್ಚಗಳ ಅಫಿಡವಿಟ್ ಬಗ್ಗೆ ಸ್ಪಷ್ಟನೆ ಮತ್ತು ವಿವರಣೆ ಕೋರಿ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ. ಇದಕ್ಕೆ ಉತ್ತರ ನೀಡುತ್ತೇನೆ ಎಂದು ಅವರು ಮಾಹಿತಿ ನೀಡಿದರು.

ಆದಾಯ ತೆರಿಗೆ ಇಲಾಖೆಯಿಂದ ನಿನ್ನೆ ನನಗೆ ನೋಟಿಸ್ ಬಂದಿದೆ. ಅವರು (ಕೇಂದ್ರ) ಎಲ್ಲ ಸದಸ್ಯರ ನಡುವೆ ನಮ್ಮನ್ನು ಹೆಚ್ಚು ಪ್ರೀತಿಸುತ್ತಿರುವುದಕ್ಕೆ ನಮಗೆ ಅತೀವ ಸಂತೋಷವಾಗಿದೆ ಎಂದು ಕೇಂದ್ರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಕಳೆದ ಮೂರು ಚುನಾವಣೆ (2009,2014,2020)ಗಳ ಅಫಿಡವಿಟ್‌ಗೆ ಸ್ಪಷ್ಟನೆ ಮತ್ತು ವಿವರಣೆ ಕೋರಿ ನೋಟಿಸ್‌ ಜಾರಿ ಮಾಡಿದ್ದಾರೆ. ಪುತ್ರಿ ಸುಪ್ರಿಯಾ ಅವರಿಗೂ ನೋಟಿಸ್‌ ನೀಡಲಾಗಿದೆ ಎಂದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಅವರಿಗೂ  ಇದೇ ರೀತಿಯ ನೋಟಿಸ್ ನೀಡಲಾಗಿದೆ.

ಕೃಷಿ ವಿಧೇಯಕ ಸಂಬಂಧ ಎಂಟು ರಾಜ್ಯಸಭಾ ಸದಸ್ಯರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಶರದ್‌ ಪವಾರ್‌  ಒಂದು ದಿನದ ಉಪವಾಸ ಆಚರಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು