ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

Last Updated 18 ನವೆಂಬರ್ 2022, 10:28 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಖರ್ಗೆ, 75,000 ಹುದ್ದೆಗಳಷ್ಟೇ ಪ್ರಧಾನಿ ಭರ್ತಿ ಮಾಡಿದ್ದಾರೆ ಎಂದು ಟೀಕಿಸಿದರು.

ಕೇಂದ್ರ ಸಚಿವಾಲಯ ಸೇವೆ ಕಚೇರಿಗಳಲ್ಲಿ 1,600ರಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಧ್ಯಮ ವರದಿಯನ್ನು ಉದ್ದೇಶಿಸಿ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಹಾಗಾದ್ದಲ್ಲಿ ಎಂಟು ವರ್ಷಗಳಲ್ಲಿ 16 ಕೋಟಿ ಹುದ್ದೆ ಸೃಷ್ಟಿಯಾಗಬೇಕಿತ್ತು. ಸರ್ಕಾರದ ವಿವಿಧ ಇಲಾಖೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಖುದ್ದೆಗಳು ಖಾಲಿ ಇವೆ. ಪ್ರಧಾನಿ 75,000 ನೇಮಕಾತಿ ಪತ್ರಗಳನ್ನು ಮಾತ್ರ ವಿತರಿಸಿದ್ದಾರೆ ಎಂದು ಖರ್ಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT