ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನ ಈ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆ ತಡೆ, ಆದರೂ ಶೇ 100ರಷ್ಟು ಮತದಾನ

Last Updated 23 ನವೆಂಬರ್ 2022, 14:47 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ಸಾಗಿದೆ. ಆದರೆ, ರಾಜಕೋಟ್ ಜಿಲ್ಲೆಯ ಹಳ್ಳಿಯೊಂದರಲ್ಲಿ ರಾಜಕೀಯ ಪಕ್ಷಗಳ ಪ್ರಚಾರವನ್ನು ನಿರ್ಬಂಧಿಸಲಾಗಿದೆ.

ಹೌದು, ರಾಜಕೋಟ್‌ನಿಂದ 20 ಕಿ.ಮೀ ದೂರದ ರಾಜ್ ಸಮಾಧಿಯಾ ಹಳ್ಳಿಯ ಜನರು ಗ್ರಾಮದಲ್ಲಿ 1983ರಿಂದ ರಾಜಕೀಯ ಪ್ರಚಾರ ಮತ್ತು ರ್‍ಯಾಲಿಗಳಿಗೆ ಅವಕಾಶ ನೀಡುತ್ತಿಲ್ಲ.

ರಾಜಕೀಯ ಪಕ್ಷಗಳಿಗೆ ಹಳ್ಳಿ ಪ್ರವೇಶ ನಿರ್ಬಂಧದ ಹೊರತಾಗಿಯೂ ಇಲ್ಲಿ ಪ್ರತಿ ಚುನಾವಣೆಯಲ್ಲೂ ಸುಮಾರು ಶೇಕಡ 100ರಷ್ಟು ಮತದಾನ ನಡೆಯುತ್ತೆ. ಮತದಾನದಿಂದ ಉದ್ದೇಶಪೂರ್ವಕವಾಗಿ ಹೊರಗುಳಿದ ವ್ಯಕ್ತಿಗೆ ₹51 ದಂಡ ವಿಧಿಸಿದ ಉದಾಹರಣೆ ಇದೆ.

1,700 ಜನರಿರುವ ಈ ಪುಟ್ಟ ಹಳ್ಳಿಯಲ್ಲಿ ಮತದಾನ ಪ್ರಕ್ರಿಯೆ ಮೇಲೆ ನಿಗಾ ಇಡಲು ಸಮಿತಿ ರಚಿಸಲಾಗಿದೆ. ಈ ಸಮಿತಿಯು ಜನರನ್ನು ಮತದಾನ ಮಾಡಲು ಪ್ರೇರೇಪಿಸುತ್ತದೆ. ಒಂದೊಮ್ಮೆ, ಮತದಾನ ಮಾಡಲು ಸಾಧ್ಯವಾಗದಿದ್ದರೆ, ಸಮಿತಿಯ ಗಮನಕ್ಕೆ ತರುವುದು ಕಡ್ಡಾಯ.

ನಮ್ಮ ಗ್ರಾಮದಲ್ಲಿ ಅಭ್ಯರ್ಥಿಗಳ ಪ್ರಚಾರಕ್ಕೆ ಅವಕಾಶ ನೀಡುವುದಿಲ್ಲ. ಯಾವ ಅಭ್ಯರ್ಥಿ ಉತ್ತಮ ಎನಿಸುವರೊ ಅವರಿಗೆ ಜನ ಮತ ಹಾಕುತ್ತಾರೆ ಎಂದು ಸ್ಥಳಿಯರೊಬ್ಬರು ತಿಳಿಸಿದ್ದಾರೆ.

ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT