ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಿದ ಸಿಬಿಐ

Last Updated 22 ಫೆಬ್ರವರಿ 2023, 15:25 IST
ಅಕ್ಷರ ಗಾತ್ರ

ನವದೆಹಲಿ: ಅಲಹಾಬಾದ್‌ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌.ಎನ್‌.ಶುಕ್ಲಾ ವಿರುದ್ಧ ಸಿಬಿಐ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ.

ನಿವೃತ್ತ ನ್ಯಾಯಮೂರ್ತಿ ಶುಕ್ಲಾ ಅವರು ಖಾಸಗಿ ಮೆಡಿಕಲ್‌ ಕಾಲೇಜೊಂದಕ್ಕೆ ಅನುಕೂಲವಾಗುವ ರೀತಿಯಲ್ಲಿ ಆದೇಶ ಹೊರಡಿಸಿದ್ದು ಸೇರಿದಂತೆ 2024–19ರ ನಡುವೆ ಅವ್ಯವಹಾರ ನಡೆಸಿದ್ದಾರೆ ಎಂದು ಸಿಬಿಐ ಪ್ರಕರಣ ದಾಖಲಿಸಿದೆ.

ನಿವೃತ್ತ ನ್ಯಾಯಮೂರ್ತಿ ವಿರುದ್ಧದ ಎರಡನೇ ಭ್ರಷ್ಟಾಚಾರ ಪ್ರಕರಣ ಇದಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈ ಹಿಂದೆ ಎಫ್‌ಐಆರ್‌ ದಾಖಲಿಸಿತ್ತು. ಶುಕ್ಲಾ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಕೋರ್ಟ್‌ ಅನುಮತಿ ನೀಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಲ್ಲಿ ಲಖನೌ, ಮೀರತ್ ಹಾಗೂ ದೆಹಲಿಯಲ್ಲಿನ ವಿವಿಧ ಸ್ಥಳಗಳ ಮೇಲೆ ಸಿಬಿಐ ಶೋಧ ನಡೆಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT