ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ ವಿಧಾನಸಭೆ ಸ್ಪೀಕರ್‌ ಆಗಿ ಥಾಮಸ್ ಎ ಸಂಗ್ಮಾ ಅವಿರೋಧ ಆಯ್ಕೆ

Last Updated 9 ಮಾರ್ಚ್ 2023, 7:46 IST
ಅಕ್ಷರ ಗಾತ್ರ

ಶಿಲ್ಲಾಂಗ್: ಮೇಘಾಲಯ ವಿಧಾನಸಭೆಯ 11ನೇ ಸ್ಪೀಕರ್ ಆಗಿ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಥಾಮಸ್ ಎ ಸಂಗ್ಮಾ ಅವರು ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಜ್ಯದ ಡೆಮಾಕ್ರಟಿಕ್ ಅಲಯನ್ಸ್(ಎಂಡಿಎ) ಸರ್ಕಾರವು 45 ಶಾಸಕರ ಬೆಂಬಲವನ್ನು ಹೊಂದಿದೆ. ಇದರಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್‌ಪಿಪಿ) 26 ಸದಸ್ಯರ ಬಲವನ್ನು ಹೊಂದಿದೆ. ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಯುಡಿಪಿ) 11 ಶಾಸಕರು ಇದ್ದರೆ, ಉಳಿದಂತೆ ಬಿಜೆಪಿ, ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ ತಲಾ ಇಬ್ಬರು ಶಾಸಕರಿದ್ದಾರೆ. ಇಬ್ಬರು ಸ್ವತಂತ್ರ ಶಾಸಕರನ್ನೂ ಹೊಂದಿದೆ.

ಈ ಹಿಂದೆ ರಾಜ್ಯಸಭಾ ಸದಸ್ಯರಾಗಿದ್ದ ಥಾಮಸ್ ಎ ಸಂಗ್ಮಾ ಅವರು ಅವಿರೋಧವಾಗಿ ಆಯ್ಕೆಯಾದರು. ಕಾಂಗ್ರೆಸ್, ಟಿಎಂಸಿ ಮತ್ತು ವಾಯ್ಸ್ ಆಫ್ ಪೀಪಲ್ಸ್ ಪಾರ್ಟಿಯು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ.

ವಿಧಾನಸಭೆಯ ವಿಶೇಷ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಹಂಗಾಮಿ ಸ್ಪೀಕರ್ ತಿಮೋತಿ ಡಿ ಶಿರಾ ಮಾತನಾಡಿ, ‘ಸ್ವೀಕರ್‌ ಸ್ಥಾನಕ್ಕೆ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಥಾಮಸ್ ಎ ಸಂಗ್ಮಾ ಅವರನ್ನು ಸ್ಪೀಕರ್ ಎಂದು ಘೋಷಿಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಮಾತನಾಡಿ, ನೂತನವಾಗಿ ಆಯ್ಕೆಯಾದ ಥಾಮಸ್ ಎ ಸಂಗ್ಮಾ ಅವರನ್ನು ಅಭಿನಂದಿಸಿದರು. ಸ್ವೀಕರ್‌ ಸ್ಥಾನಕ್ಕೆ ಅವರು ನ್ಯಾಯ ಒದಗಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT