ಶುಕ್ರವಾರ, ಅಕ್ಟೋಬರ್ 22, 2021
29 °C

ಕೆಲವರಿಂದ ರಾಜಕೀಯ ‍ಪ್ರವಾಸೋದ್ಯಮ: ಕೇಂದ್ರ ಸಚಿವ ಅನುರಾಗ್ ಠಾಕೂರ್ ವ್ಯಂಗ್ಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೆಲವರು ರಾಜಕೀಯ ಪ್ರವಾಸೋದ್ಯಮ ಮಾಡುತ್ತಿರುವುದು ದುರದೃಷ್ಟಕರ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪ್ರತಿಪಕ್ಷ ನಾಯಕರನ್ನು ಉದ್ದೇಶಿಸಿ ವ್ಯಂಗ್ಯವಾಡಿದ್ದಾರೆ.

ಕೆಲವರಿಗೆ ನ್ಯಾಯಾಂಗ ಪ್ರಕ್ರಿಯೆಯ ಮೇಲೆ ನಂಬಿಕೆ ಇಲ್ಲವೆಂದು ಭಾವಿಸುತ್ತೇನೆ. ಅಂಥವರು ರಾಜಕೀಯ ಪ್ರವಾಸೋದ್ಯಮ (ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆ ಉದ್ದೇಶಿಸಿ) ಮಾಡುತ್ತಿರುವುದು ದುರದೃಷ್ಟಕರ. ರಾಜಸ್ಥಾನ, ಪಂಜಾಬ್ ಮತ್ತು ಛತ್ತೀಸಗಡಗಳಲ್ಲಿ ಅನೇಕ ಅಪರಾಧ ಪ್ರಕರಣಗಳಾಗುತ್ತಿವೆ. ಆದರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಅಲ್ಲಿಗೆ ಎಂದೂ ಭೇಟಿ ನೀಡಿಲ್ಲ ಎಂದು ಅನುರಾಗ್ ಠಾಕೂರ್ ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಈ ಮಧ್ಯೆ, ‘ನನ್ನ ಮಗ ಆಶಿಶ್‌ ಮಿಶ್ರಾ ಮುಗ್ಧ. ಆತ ನಾಳೆ (ಶನಿವಾರ)  ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾನೆ’ ಎಂದು ಕೇಂದ್ರ ಸಚಿವ ಅಜಯ್‌ ಮಿಶ್ರಾ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು