ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಯುಇಟಿ: ಪರೀಕ್ಷೆ ಬರೆಯಲು ಮತ್ತೊಂದು ಅವಕಾಶ

ಪರೀಕ್ಷಾ ಕೇಂದ್ರದ ಬದಲಾವಣೆಯಿಂದ ಗೈರಾದ ಅಭ್ಯರ್ಥಿಗಳಿಗೆ ನಿಟ್ಟುಸಿರು
Last Updated 15 ಜುಲೈ 2022, 12:26 IST
ಅಕ್ಷರ ಗಾತ್ರ

ನವದೆಹಲಿ:ಪರೀಕ್ಷಾ ಕೇಂದ್ರದ ಬದಲಾವಣೆ ಕಾರಣದಿಂದ ವಿಶ್ವವಿದ್ಯಾಲಯಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಯುಇಟಿ–ಯುಜಿ) ಮೊದಲ ದಿನ ಗೈರಾದ ಅಭ್ಯರ್ಥಿಗಳಿಗೆ ಆಗಸ್ಟ್‌ನಲ್ಲಿ ನಡೆಯಲಿರುವ ಎರಡನೇ ಹಂತದ ಪರೀಕ್ಷೆಯಲ್ಲಿ ಮತ್ತೊಮ್ಮೆ ಅವಕಾಶ ನೀಡಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ (ಎನ್‌ಟಿಎ) ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ನವ ಜಲಪೈಗುರಿ ಮತ್ತು ಪಂಜಾಬಿನ ಪಠಾಣಕೋಟ್‌ನ ಎರಡು ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ಕಾರಣದಿಂದ ಪರೀಕ್ಷೆ ರದ್ದಾಗಿದೆ.

‘ಈ ಪರೀಕ್ಷಾ ಕೇಂದ್ರಗಳ ಸುಮಾರು 190 ಅಭ್ಯರ್ಥಿಗಳು ಮತ್ತು ಪರೀಕ್ಷಾ ಕೇಂದ್ರಗಳ ಬದಲಾವಣೆಯ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ಇತರೆ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರೀಯ ವಿಶ್ವವಿದ್ಯಾಲಯಗಳೂ ಸೇರಿದಂತೆ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ದೇಶದ 510 ನಗರಗಳಲ್ಲಿ ಶುಕ್ರವಾರದಿಂದ ಪರೀಕ್ಷೆ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT